ಸಾರಾಂಶ
ವಾರಾಣಸಿ: ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಹಿಂದೂ ದೇವರ ಪೂಜೆಗೆ ಅವಕಾಶ ನೀಡಿರುವ ವಾರಾಣಸಿ ಜಿಲ್ಲಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ನಡೆಸಿರುವ ಅಲಹಾಬಾದ್ ಹೈಕೋರ್ಟ್, ತನ್ನ ತೀರ್ಪನ್ನು ಗುರುವಾರ ಕಾಯ್ದಿರಿಸಿದೆ.
ಜ್ಞಾನವಾಪಿ ಮಸೀದಿ ವ್ಯವಹಾರ ನೋಡಿಕೊಳ್ಳುವ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ ಸಲ್ಲಿಸಿದ ಮೇಲ್ಮನವಿ ಅರ್ಜಿಯನ್ನು ತೀರ್ಪನ್ನು ಕಾಯ್ದಿರಿಸಲಾಗಿದೆ.
ಇನ್ನು ಅನುಮತಿಸಲಾದ ಪೂಜೆಯ ವಿರುದ್ಧ ಜ್ಞಾನವಾಪಿ ಮಸೀದಿ ಸಮಿತಿ ಸಲ್ಲಿಸಿರುವ ಪ್ರತ್ಯೇಕ ಮನವಿಯ ವಿಚಾರಣೆಗೆ ವಾರಣಾಸಿ ಜಿಲ್ಲಾ ಕೋರ್ಟು, ಫೆ. 28ರ ದಿನಾಂಕ ನಿಗದಿಪಡಿಸಿದೆ.
ದೇವಸ್ಥಾನದ ಮೇಲೆ ಮಸಿದಿ ನಿರ್ಮಿಸಲಾಗಿದೆಯೇ ಕುರಿತು ಸಂಶೋಧನೆ ನಡೆಸಿದ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಸಲ್ಲಿಸಿದ ಬಳಿಕ ವಾರಾಣಸಿ ಜಿಲ್ಲಾ ನ್ಯಾಯಾಲಯವು ಜನವರಿ 31 ರಂದು ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿರುವ ವಿಗ್ರಹಗಳಿಗೆ ಪೂಜೆ ಸಲ್ಲಿಸಲು ಹಿಂದೂಗಳಿಗೆ ಅವಕಾಶ ನೀಡಿ ತೀರ್ಪು ನೀಡಿತ್ತು.
ಇದನ್ನು ವಿರೋಧಿಸಿ ಸಲ್ಲಿಸಲಾಗಿರುವ ಎರಡೂ ಒಂದೇ ರೀತಿಯ ಅರ್ಜಿಗಳನ್ನು ಹೈಕೋರ್ಟ್ ಹಾಗೂ ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದೆ.