26/11 ಮುಂಬೈ ದಾಳಿ ರೂವಾರಿ ಹಫೀಜ್‌ ಸಯೀದ್‌ಗೆ 78 ವರ್ಷ ಜೈಲುಶಿಕ್ಷೆ

| Published : Jan 11 2024, 01:31 AM IST / Updated: Jan 11 2024, 10:59 AM IST

ಸಾರಾಂಶ

ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರ, 2008ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್‌ ಹಾಗೂ ಲಷ್ಕರ್‌ ಎ ತೊಯ್ಬಾ ನಾಯಕ ಹಫೀಜ್‌ ಸಯೀದ್‌ (73)ಗೆ ಪಾಕಿಸ್ತಾನದಲ್ಲಿ ಬರೋಬ್ಬರಿ 78 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ವಿಶ್ವಸಂಸ್ಥೆ ತಿಳಿಸಿದೆ.

ವಿಶ್ವಸಂಸ್ಥೆ: ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರ, 2008ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್‌ ಹಾಗೂ ಲಷ್ಕರ್‌ ಎ ತೊಯ್ಬಾ ನಾಯಕ ಹಫೀಜ್‌ ಸಯೀದ್‌ (73)ಗೆ ಪಾಕಿಸ್ತಾನದಲ್ಲಿ ಬರೋಬ್ಬರಿ 78 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ವಿಶ್ವಸಂಸ್ಥೆ ತಿಳಿಸಿದೆ.

ಸುಮಾರು 7 ಭಯೋತ್ಪಾದಕ ಚಟುವಟಿಕೆಗಳಿಗೆ ಹಣಕಾಸಿನ ನೆರವು ನೀಡಿದ ಅಪರಾಧದಡಿ ಸಯೀದ್‌ಗೆ 2020ರ ಫೆಬ್ರವರಿಯಲ್ಲಿ ಶಿಕ್ಷೆ ವಿಧಿಸಲಾಗಿದ್ದು, ಸದ್ಯ ಆತ ಜೈಲುವಾಸದಲ್ಲಿದ್ದಾನೆ ಎಂದು ವಿಶ್ವಸಂಸ್ಥೆ ನವೀಕರಿಸಿರುವ ತನ್ನ ಮಾಹಿತಿಯಲ್ಲಿ ತಿಳಿಸಿದೆ. 

ಮುಂಬೈ ಭಯೋತ್ಪಾದನಾ ದಾಳಿ ಬಳಿಕ ವಿಶ್ವಸಂಸ್ಥೆಯು ಸಯೀದ್‌ನನ್ನು ‘ಜಾಗತಿಕ ಭಯೋತ್ಪಾದಕ’ ಎಂದು ಘೋಷಿಸಿತ್ತು. ಕಳೆದ ಡಿಸೆಂಬರ್‌ನಲ್ಲಿ ಸಯೀದ್‌ನನ್ನು ಹಸ್ತಾಂತರಿಸುವಂತೆ ಭಾರತವು ಪಾಕಿಸ್ತಾನವನ್ನು ಕೇಳಿಕೊಂಡಿತ್ತು. 

ಇದೇ ವೇಳೆ ಮುಂಬೈ ದಾಳಿಗೆ ಲಷ್ಕರ್‌-ಎ- ತಯ್ಬಾ ಭಯೋತ್ಪಾದಕರಿಗೆ ತರಬೇತಿ ನೀಡಿದ್ದ ಮತ್ತೊಬ್ಬ ಪ್ರಮುಖ ಭಯೋತ್ಪಾದಕ ಹಫೀಜ್ ಅಬ್ದುಲ್ ಸಲಾಂ ಭುಟ್ಟವಿ ಕಳೆದ ಮೇನಲ್ಲಿ ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದ ಜೈಲಿನಲ್ಲಿ ಸಾವನ್ನಪ್ಪಿದ್ದಾನೆ ಎಂದು ವಿಶ್ವಸಂಸ್ಥೆಯು ಭಯೋತ್ಪಾದಕರ ಮಾಹಿತಿಯಲ್ಲಿ ನವೀಕರಣ ಮಾಡಿದೆ.