ಸಾರಾಂಶ
ಕೋಲ್ಕತಾ: ಪಶ್ಚಿಮ ಬಂಗಾಳದ ಹಲವೆಡೆ ಗುರುವಾರ ಭಾರೀ ಮಳೆಯಾಗಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ 24 ಗಂಟೆಯಲ್ಲಿ ಬಂಗಾಳದಲ್ಲಿ 109 ಮೀ.ಮೀನಷ್ಟು ದಾಖಲೆ ಪ್ರಮಾಣದ ಮಳೆಯಾಗಿದ್ದು, ಇನ್ನು ಮೂರ್ನಾಲ್ಕು ದಿನ ಮಳೆ ಮಂದುವರೆಯಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊನಾರ್ಕ್ ದೇಗುಲಕ್ಕೆ ನುಗ್ಗಿದ ನೀರುಭುವನೇಶ್ವರ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಕಡಿಮೆ ಒತ್ತಡದಿಂದ ಒಡಿಶಾದಲ್ಲಿ ಭಾರೀ ಮಳೆಯಾಗುತ್ತಿದೆ. ಪುರಿ ಜಿಲ್ಲೆಯಲ್ಲಿ ಗುರುವಾರ ಶಾಲಾ- ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿತ್ತು. ಪ್ರಸಿದ್ಧ ಕೊನಾರ್ಕ್ ಸೂರ್ಯ ದೇಗುಲಕ್ಕೂ ಮಳೆ ನೀರು ನುಗ್ಗಿದ್ದು,ದೇವಸ್ಥಾನ ಜಲಾವೃತಗೊಂಡಿದ್ದು, ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದರು.
ಸಹಜ ಸ್ಥಿತಿಗೆ ಮರಳಿದ ಮುಂಬೈಮುಂಬೈ: ಮುಂಬೈನಲ್ಲಿ ಭಾರೀ ಮಳೆಯಿಂದಾಗಿ ಅಸ್ತವ್ಯಸ್ತಗೊಂಡಿದ್ದ ಸಂಚಾರ ವ್ಯವಸ್ಥೆ ಸಹಜ ಸ್ಥಿತಿಗೆ ಮರಳಿದೆ. ಮಳೆಯಿಂದಾಗಿ ಸ್ಥಗಿತಗೊಂಡಿದ್ದ ರೈಲುಗಳ ಓಡಾಟ ಪುನಾರಂಭವಾಗಿದೆ. ಹಲವೆಡೆ ಮಳೆಯ ಪ್ರಮಾಣ ತಗ್ಗಿದ್ದು, ತುಂತು ರು ಮಳೆಯಾಗಿದೆ. ಮುಂಬೈ, ಥಾಣೆ, ಪಾಲ್ಘರ್, ರಾಜಘಢ್ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಹಿಮಾಚಲದಲ್ಲಿ ಮೇಘ ಸ್ಫೋಟ:ಶಿಮ್ಲಾ: ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯಲ್ಲಿ ಗುರುವಾರ ಮೇಘಸ್ಫೋಟ ಸಂಭವಿಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಪ್ರತಿಕೂಲ ಹವಾಮಾನ ಪರಿಸ್ಥಿತಿಯಿಂದಾಗಿ ರಾಜ್ಯದಲ್ಲಿ ಸುಮಾರು 53 ರಸ್ತೆಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ಬಂದ್ ಮಾಡಲಾಗಿದೆ. ರಾಜ್ಯದಲ್ಲಿ ಭಾರೀ ಮಳೆ ಸಂಭವಿಸಬಹುದು ಎಂದು ಹವಾಮಾನ ಇಲಾಖೆ ಸೂಚಿಸಿದೆ.