ಕೇರಳದಲ್ಲಿ ಭಾರಿ ಮಳೆ: 7 ಜಿಲ್ಲೆಗಳ ಶಾಲೆ-ಕಾಲೇಜಿಗೆ ರಜೆ

| Published : Jul 16 2024, 11:22 AM IST

kerala rain havoc
ಕೇರಳದಲ್ಲಿ ಭಾರಿ ಮಳೆ: 7 ಜಿಲ್ಲೆಗಳ ಶಾಲೆ-ಕಾಲೇಜಿಗೆ ರಜೆ
Share this Article
  • FB
  • TW
  • Linkdin
  • Email

ಸಾರಾಂಶ

ಕೇರಳದ ಹಲವು ಕಡೆಗಳಲ್ಲಿ ಗಾಳಿ ಸಹಿತ ಮಳೆ ಮುಂದುವರೆದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ 7 ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿತ್ತು. ತ್ರಿಶೂರ್, ಮಲಪ್ಪುರಂ, ಕಲ್ಲಿಕೋಟೆ, ಕಣ್ಣೂರು, ಕಾಸರಗೋಡು, ಎರ್ನಾಕುಲಂ, ವಯನಾಡು ಜಿಲ್ಲೆಗಳ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿತ್ತು.

ತಿರವನಂತಪುರಂ: ಕೇರಳದ ಹಲವು ಕಡೆಗಳಲ್ಲಿ ಗಾಳಿ ಸಹಿತ ಮಳೆ ಮುಂದುವರೆದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ 7 ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿತ್ತು. ತ್ರಿಶೂರ್, ಮಲಪ್ಪುರಂ, ಕಲ್ಲಿಕೋಟೆ, ಕಣ್ಣೂರು, ಕಾಸರಗೋಡು, ಎರ್ನಾಕುಲಂ, ವಯನಾಡು ಜಿಲ್ಲೆಗಳ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿತ್ತು.

ಕೇರಳದಲ್ಲಿ ಕಳೆದೆರೆಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಹಲವು ಕಡೆ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಆಸ್ತಿ ಪಾಸ್ತಿ ನಷ್ಟವಾಗಿವೆ. ಇಂದು ಕೂಡ ವರುಣನ ಆರ್ಭಟ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

 ತಿರುವನಂತಪುರಂ, ಕೊಲ್ಲಂ, ಎರ್ನಾಕುಲಂ, ಆಲಪ್ಪುಳ ಭಾಗದಲ್ಲಿ ಗಾಳಿ ಸಹಿತ ಭಾರೀ ಮಳೆಯಾಗಲಿದ್ದು ಮುಂಜಾಗ್ರತಾ ಕ್ರಮಗಳನ್ನು ವಹಿಸುವಂತೆ ಇಲಾಖೆ ಹೇಳಿದೆ.