ಉತ್ತರ ಭಾರತದ ಕೆಲ ರಾಜ್ಯಗಳು ಮಳೆಯಿಂದ ನಲುಗಿರುವ ನಡುವೆಯೇ, ಶುಕ್ರವಾರ ದೇಶದ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ

ನವದೆಹಲಿ: ಉತ್ತರ ಭಾರತದ ಕೆಲ ರಾಜ್ಯಗಳು ಮಳೆಯಿಂದ ನಲುಗಿರುವ ನಡುವೆಯೇ, ಶುಕ್ರವಾರ ದೇಶದ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. 

ಗುಜರಾತ್‌, ಮಧ್ಯಪ್ರದೇಶ, ರಾಜಸ್ಥಾನ, ಗೋವಾ, ಮಹಾರಾಷ್ಟ್ರ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್‌, ಮಣಿಪುರ, ಮಿಜೋರಾಂ, ತ್ರಿಪುರಾ, ಉತ್ತರಾಖಂಡ, ಉತ್ತರಪ್ರದೇಶಗಳಲ್ಲಿ ಮಳೆ ಅಬ್ಬರಿಸಲಿದೆ ಎಂದು ಇಲಾಖೆ ಹೇಳಿದೆ.