ಸಾರಾಂಶ
ಲೆಬನಾನ್‌ನಲ್ಲಿ ಹಿಜ್ಬುಲ್ಲಾ ಉಗ್ರರು ಬಳಸುತ್ತಿದ್ದ ಪೇಜರ್, ವಾಕಿಟಾಕಿ, ರೇಡಿಯೋ ಸೆಟ್‌ಗಳು ಸ್ಫೋಟಗೊಂಡ ಬೆನ್ನಲ್ಲೇ, ಲೆಬನಾನ್ ಮತ್ತು ಇಸ್ರೇಲ್ ನಡುವೆ ಸಂಘರ್ಷ ಆರಂಭವಾಗಿದೆ.
ಬೈರೂತ್: ಲೆಬನಾನ್‌ನಲ್ಲಿ ಹಿಜ್ಬುಲ್ಲಾ ಉಗ್ರರು ಬಳಸುತ್ತಿದ್ದ ಪೇಜರ್, ವಾಕಿಟಾಕಿ, ರೇಡಿಯೋ ಸೆಟ್‌ಗಳು ಸ್ಫೋಟಗೊಂಡ ಬೆನ್ನಲ್ಲೇ, ಲೆಬನಾನ್ ಮತ್ತು ಇಸ್ರೇಲ್ ನಡುವೆ ಸಂಘರ್ಷ ಆರಂಭವಾಗಿದೆ.
ಮಂಗಳವಾರ ಮತ್ತು ಬುಧವಾರದ ಸ್ಫೋಟದ ಬೆನ್ನಲ್ಲೇ ಇಸ್ರೇಲ್ ಸೇನೆ, ನೆರೆಯ ಲೆಬನಾನ್ ಗಡಿಗೆ ತನ್ನ ಹೆಚ್ಚಿನ ಸಂಖ್ಯೆಯ ಯೋಧರ ನಿಯೋಜಿಸಿ ವೈಮಾನಿಕ ದಾಳಿ ನಡೆಸಿತ್ತು. ಜೊತೆಗೆ ಗುರುವಾರ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರುಲ್ಲಾ ದೇಶವನ್ನು ಉದ್ದೇಶಿಸಿ ಮಾತನಾಡುವ ವೇಳೆ ಮತ್ತೊಂದು ಸುತ್ತಿನಲ್ಲಿ ವೈಮಾನಿಕ ದಾಳಿ ನಡೆಸಿದೆ.ಇನ್ನೊಂದೆಡೆ ಇಸ್ರೇಲ್ ದಾಳಿಗೆ ಪ್ರತಿಯಾಗಿ ಹಿಜ್ಬುಲ್ಲಾ ಉಗ್ರರು ಕೂಡಾ ಗುರುವಾರ ಭಾರೀ ಪ್ರಮಾಣದಲ್ಲಿ ರಾಕೆಟ್ ಬಳಸಿ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ತನ್ನ ಇಬ್ಬರು ಯೋಧರು ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ಹೇಳಿದೆ.
ಹೀಗಾಗಿ ಮುಂದಿನ ದಿನಗಳಲ್ಲಿ ಉಭಯ ದೇಶಗಳ ನಡುವಿನ ಸಂಘರ್ಷ ಮತ್ತಷ್ಟು ತಾರಕಕ್ಕೇರುವ ಸಾಧ್ಯತೆ ಇದೆ ಎಂಬ ಭೀತಿ ಸೃಷ್ಟಿಯಾಗಿದೆ.