ಅನರ್ಹತೆ ಆದೇಶ ಪ್ರಶ್ನಿಸಿ ಹಿಮಾಚಲದ 6 ಕಾಂಗ್ರೆಸ್‌ ಶಾಸಕರು ಸುಪ್ರೀಂಗೆ

| Published : Mar 06 2024, 02:18 AM IST

ಅನರ್ಹತೆ ಆದೇಶ ಪ್ರಶ್ನಿಸಿ ಹಿಮಾಚಲದ 6 ಕಾಂಗ್ರೆಸ್‌ ಶಾಸಕರು ಸುಪ್ರೀಂಗೆ
Share this Article
  • FB
  • TW
  • Linkdin
  • Email

ಸಾರಾಂಶ

ಸ್ಪೀಕರ್‌ ತಮ್ಮನ್ನು ಶಾಸಕ ಸ್ಥಾನದಿಂದ ಅನರ್ಹ ಮಾಡಿದ್ದನ್ನು ಪ್ರಶ್ನಿಸಿ ಹಿಮಾಚಲ ಪ್ರದೇಶದ ಆರು ಕಾಂಗ್ರೆಸ್‌ ಶಾಸಕರು ಸುಪ್ರೀಂ ಕೋರ್ಟ್‌ನಲ್ಲಿ ದಾವೆ ಹೂಡಿದ್ದಾರೆ.

ನವದೆಹಲಿ: ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ವಿಪ್‌ ಉಲ್ಲಂಘಿಸಿ ಬಿಜೆಪಿಗೆ ಮತ ಹಾಕಿದ ಕಾರಣಕ್ಕಾಗಿ ವಿಧಾನಸಭೆಯಿಂದ ಉಚ್ಛಾಟನೆಗೊಂಡ 6 ಕಾಂಗ್ರೆಸ್‌ ಶಾಸಕರು, ಸ್ಪೀಕರ್‌ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ತಮ್ಮನ್ನು ಹಿಮಾಚಲಪ್ರದೇಶದ ಸ್ಪೀಕರ್‌ ಆಗಿರುವ ಕುಲ್ದೀಪ್‌ ಸಿಂಗ್‌ ಪಥಾನಿಯಾ ಅವರು ಫೆ.29ರಂದು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಬಜೆಟ್‌ ಅಧಿವೇಶನದಲ್ಲಿ ತಾವು ಮತ ಹಾಕಲು ಸಾಧ್ಯವಾಗಲಿಲ್ಲ ಎಂಬುದಾಗಿ ದಾವೆಯಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯಸಭೆಯಲ್ಲಿ ಆರು ಕಾಂಗ್ರೆಸ್‌ ಶಾಸಕರು ಬಿಜೆಪಿಗೆ ಮತ ಹಾಕಿದ್ದರಿಂದ ಬಿಜೆಪಿ-ಕಾಂಗ್ರೆಸ್‌ ಅಭ್ಯರ್ಥಿಗಳಿಬ್ಬರೂ ತಲಾ 34 ಮತಗಳನ್ನು ಪಡೆದು ಬಳಿಕ ಲಾಟರಿ ಡ್ರಾನಲ್ಲಿ ಬಿಜೆಪಿ ಅಭ್ಯರ್ಥಿಯನ್ನು ವಿಜಯಿ ಎಂದು ಘೋಷಿಸಲಾಗಿತ್ತು.