ಸಾರಾಂಶ
ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದು, ಹಿಸಾರ್‌ನಿಂದ ಕಾಂಗ್ರೆಸ್ ಅಭ್ಯರ್ಥಿಯಾಗುವ ಸಾಧ್ಯತೆಯಿದೆ.
ಚಂಡೀಗಢ: ಲೋಕಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವಾಗ ಹರ್‍ಯಾಣದ ಹಿಸಾರ್ ಕ್ಷೇತ್ರದಿಂದ ಬಿಜೆಪಿ ಸಂಸದರಾಗಿದ್ದ ಬ್ರಿಜೇಂದ್ರ ಸಿಂಗ್, ಕೇಸರಿ ಪಕ್ಷ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
ಬಲವಾದ ರಾಜಕೀಯ ಕಾರಣಗಳಿರುವ ಹಿನ್ನೆಲೆಯಲ್ಲಿ ತಾವು ಪಕ್ಷವನ್ನು ತೊರೆಯುತ್ತಿರುವುದಾಗಿ ಪ್ರಕಟಿಸಿದ್ದಾರೆ ಹಾಗೂ ಬಳಿಕ ನವದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಕಾಂಗ್ರೆಸ್ ಸೇರಿದ್ದಾರೆ. ಅವರು ಲೋಕಸಭಾ ಚುನಾವಣೆಯಲ್ಲಿ ತಮ್ಮ ಹಿಸಾರ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಬಹುದು ಎನ್ನಲಾಗಿದೆ.ಈ ಕುರಿತು ಟ್ವೀಟ್ ಮಾಡಿ, ‘ಬಲವಾದ ಕಾರಣಗಳ ಹಿನ್ನೆಲೆಯಲ್ಲಿ ನಾನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನಗೆ ಸಂಸದನಾಗಿ ಸೇವೆ ನೀಡಲು ಅವಕಾಶ ನೀಡಿದ ಪಕ್ಷದ ವರಿಷ್ಠರಿಗೆ ಕೃತಜ್ಞತೆ ಅರ್ಪಿಸುತ್ತೇನೆ’ ಎಂದು ತಿಳಿಸಿದ್ದಾರೆ.;Resize=(128,128))
;Resize=(128,128))
;Resize=(128,128))
;Resize=(128,128))