ಕರ್ನಾಟಕದ ಬೀದರ್ ಮೂಲದ 26 ವರ್ಷದ ವ್ಯಕ್ತಿಯೊಬ್ಬ ಹೈದರಾಬಾದ್‌ನ ಕಟ್ಟಾ ಮೈಸಮ್ಮ ದೇವಸ್ಥಾನ ಪ್ರವೇಶಿಸಿ ಆವರಣದಲ್ಲೇ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿರುವ ಘಟನೆ ನಡೆದಿದೆ. ಈ ಸಂಬಂಧ ಆತನನ್ನು ಭಕ್ತರು ಥಳಿಸಿದ್ದು, ಬಳಿಕ ಪೊಲೀಸರು ಬಂಧಿಸಿದ್ದಾರೆ.
ಹೈದರಾಬಾದ್: ಕರ್ನಾಟಕದ ಬೀದರ್ ಮೂಲದ 26 ವರ್ಷದ ವ್ಯಕ್ತಿಯೊಬ್ಬ ಹೈದರಾಬಾದ್‌ನ ಕಟ್ಟಾ ಮೈಸಮ್ಮ ದೇವಸ್ಥಾನ ಪ್ರವೇಶಿಸಿ ಆವರಣದಲ್ಲೇ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿರುವ ಘಟನೆ ನಡೆದಿದೆ. ಈ ಸಂಬಂಧ ಆತನನ್ನು ಭಕ್ತರು ಥಳಿಸಿದ್ದು, ಬಳಿಕ ಪೊಲೀಸರು ಬಂಧಿಸಿದ್ದಾರೆ. ಸಫಿಲ್ಗುಡದಲ್ಲಿರುವ ಕಟ್ಟಾ ಮೈಸಮ್ಮ ದೇವಸ್ಥಾನವನ್ನು ಅಕ್ರಮವಾಗಿ ಪ್ರವೇಶಿಸಿದ 26 ವರ್ಷದ ಅಲ್ತಾಫ್ ಈ ಕೃತ ಎಸಗಿದಾತ. ಆತ ಮೂತ್ರ ವಿಸರ್ಜನೆ ಮಾಡುತ್ತಿದ್ದನ್ನು ಗಮನಿಸಿದ ಕೆಲವರು ಆತನನ್ನು ಈ ಬಗ್ಗೆ ಪ್ರಶ್ನಿಸಿದ್ದಾರೆ. ಮಾತ್ರವಲ್ಲದೇ ಆಕ್ರೋಶಗೊಂಡು ಥಳಿಸಿದ್ದಾರೆ. ಇದರ ವಿಡಿಯೋ, ಇಂಟರ್ನೆಟ್‌ನಲ್ಲಿ ವೈರಲ್ ಆಗಿದೆ.
ಘಟನೆ ಬೆನ್ನಲ್ಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಆತನನ್ನು ಬಂಧಿಸಿದ್ದು, ಬಿಎನ್‌ಎಸ್ ಕಾನೂನಿನಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಆಕ್ರೋಶ:
ಘಟನೆಗೆ ಹಿಂದೂಪರ ಸಂಘಟನೆಗಳು, ಬಿಜೆಪಿ ಆಕ್ರೋಶ ವ್ಯಕ್ತಪಡಿಸಿವೆ. ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತಂದ ಆತನನ್ನು ಎನ್‌ಕೌಂಟರ್ ಮಾಡಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಜತೆಗೆ ತೆಲಂಗಾಣದಲ್ಲಿ ಆಡಳಿತರೂಢ ಕಾಂಗ್ರೆಸ್ ಹಿಂದೂಗಳ ಮೇಲಿನ ದಾಳಿಯಲ್ಲಿ ಬಾಂಗ್ಲಾ ಪಾಕಿಸ್ತಾನವನ್ನೂ ಮೀರಿಸುತ್ತಿದೆ ಎಂದು ಕಿಡಿಕಾರಿದೆ.