ಸಾರಾಂಶ
ಭಾರತೀಯ ವಾಯಪಡೆಯ ಮಿಗ್-29 ಯುದ್ಧ ವಿಮಾನವು ಸೋಮವಾರ ಉತ್ತರಪ್ರದೇಶದ ಆಗ್ರಾದಲ್ಲಿ ಪತನಗೊಂಡಿದೆ. ಜೆಟ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ.
ಆಗ್ರಾ: ಭಾರತೀಯ ವಾಯಪಡೆಯ ಮಿಗ್-29 ಯುದ್ಧ ವಿಮಾನವು ಸೋಮವಾರ ಉತ್ತರಪ್ರದೇಶದ ಆಗ್ರಾದಲ್ಲಿ ಪತನಗೊಂಡಿದೆ. ಜೆಟ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ.
ಹಾರಾಟದ ವೇಳೆ ಜೆಟ್‌ನಲ್ಲಿ ತಾಂತ್ರಿಕದೋಷ ಕಾಣಿಸಿಕೊಂಡಿದ್ದು, ಪತನಗೊಂಡಿದೆ ಎಂದು ಮೂಲಗಳು ತಿಳಿಸಿವೆ.ಜೆಟ್‌ನಲ್ಲಿದ್ದ ಇಬ್ಬರೂ ಪೈಲಟ್‌ಗಳು ಜಿಗಿದು ಸುರಕ್ಷಿತವಾಗಿದ್ದು, ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದು, ಈ ಬಗ್ಗೆ ಆಂತರಿಕ ತನಿಖೆಗೆ ಆದೇಶಿಸಿದ್ದಾರೆ.
ಈ ಹಿಂದೆ ಸೆ.2 ರಂದು ಮಿಗ್-29 ಯುದ್ಧವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು, ರಾಜಸ್ಥಾನದ ಬಾಢಮೇರ್‌ನಲ್ಲಿ ಪತನಗೊಂಡಿತ್ತು. ಯಾವುದೇ ಸಾವುನೋವು ಸಂಭವಿಸಿಲ್ಲ.