ಸಾರಾಂಶ
ಪಾಕಿಸ್ತಾನ ಸರ್ಕಾರದ ವಿರುದ್ಧ ಹೋರಾಡಲು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷ ಆಹ್ವಾನಿಸಿದೆ. ಈ ಆಹ್ವಾನವನ್ನು ಖೈಬರ್ ಪಖ್ತುಂಖ್ವಾ ಮುಖ್ಯಮಂತ್ರಿಯ ಮಾಹಿತಿ ಸಲಹೆಗಾರ ಮುಹಮ್ಮದ್ ಅಲಿ ಸೈಫ್ ಅವರು ನೀಡಿದ್ದಾರೆ.
ಇಸ್ಲಾಮಾಬಾದ್: ಪಾಕಿಸ್ತಾನ ಸರ್ಕಾರದ ವಿರುದ್ಧ ಹೋರಾಡಲು ನಮ್ಮೊಂದಿಗೆ ಬನ್ನಿ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ಆಹ್ವಾನಿಸಿದೆ.
ಖೈಬರ್ ಪಖ್ತುಂಖ್ವಾ ಮುಖ್ಯಮಂತ್ರಿಯ ಮಾಹಿತಿ ಸಲಹೆಗಾರ ಮುಹಮ್ಮದ್ ಅಲಿ ಸೈಫ್ ಅವರು ಶುಕ್ರವಾರ ಜಿಯೋ ನ್ಯೂಸ್ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ‘ಅ.15 ಮತ್ತು 16 ರಂದು ನಡೆಯಲಿರುವ ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ)ಯ ಸಮಾವೇಶದಲ್ಲಿ ಭಾಗವಹಿಸಲಿರುವ ಜೈಶಂಕರ್ ಅವರು ಪಾಕಿಸ್ತಾನ ಸರ್ಕಾರದ ವಿರುದ್ಧ ಹೋರಾಡಲು ನಮ್ಮೊಂದಿಗೆ ಬರಬೇಕು’ ಎಂದು ಆಹ್ವಾನಿಸಿದ್ದಾರೆ.