ಖುದ್ದು ವಿಮಾನ ನಿಲ್ಧಾಣಕ್ಕೆ ತೆರಳಿ ಕತಾರ್‌ ದೊರೆಗೆ ಪ್ರಧಾನಿ ನರೇಂದ್ರ ಮೋದಿ ಸ್ವಾಗತ

| N/A | Published : Feb 18 2025, 12:31 AM IST / Updated: Feb 18 2025, 04:39 AM IST

ಸಾರಾಂಶ

ಕತಾರ್ ದೊರೆ ಅಮೀರ್ ಶೇಖ್ ತಮೀಮ್ ಬಿನ್ ಹಮದ್ ಅಲ್-ಥಾನಿ ಅವರು 2 ದಿನಗಳ ಭೇಟಿಗಾಗಿ ಸೋಮವಾರ ಸಂಜೆ ಭಾರತಕ್ಕೆ ಆಗಮಿಸಿದ್ದಾರೆ.

ನವದೆಹಲಿ: ಕತಾರ್ ದೊರೆ ಅಮೀರ್ ಶೇಖ್ ತಮೀಮ್ ಬಿನ್ ಹಮದ್ ಅಲ್-ಥಾನಿ ಅವರು 2 ದಿನಗಳ ಭೇಟಿಗಾಗಿ ಸೋಮವಾರ ಸಂಜೆ ಭಾರತಕ್ಕೆ ಆಗಮಿಸಿದ್ದಾರೆ. ಅಪರೂಪದ ವಿದ್ಯಮಾನದಲ್ಲಿ ಖುದ್ದು ಪ್ರಧಾನಿ ನರೇಂದ್ರ ಮೋದಿಯವರೇ ಇಲ್ಲಿನ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್‌ ದೊರೆಯನ್ನು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. 

ಪ್ರಧಾನಿ ಮೋದಿ ವಿಶೇಷ ಆಹ್ವಾನದ ಮೇರೆಗೆ ದೊರೆ ಭಾರತಕ್ಕೆ ಆಗಮಿಸಿದ್ದಾರೆ. ಅಮೀರ್ ಮಂಗಳವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದ ಬಳಿಕ ಪ್ರಧಾನಿ ಮೋದಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರೊಂದಿಗೂ ಚರ್ಚಿಸಲಿದ್ದಾರೆ.

ಕಳೆದ ವರ್ಷ ಕತಾರ್‌ನಲ್ಲಿ ದೇಶದ್ರೋಹದ ಆರೋಪದ ಮೇಲೆ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಭಾರತೀಯ ಸೇನೆಯ 8 ನಿವೃತ್ತ ಯೋಧರನ್ನು ಮೋದಿ ಕೋರಿಕೆಯ ಮೇರೆಗೆ ಕತಾರ್‌ ಬಿಡುಗಡೆ ಮಾಡಿತ್ತು.