ಸಾರಾಂಶ
ಯೆಮೆನ್ ಪ್ರಜೆಗೆ ಪ್ರಜ್ಞೆ ತಪ್ಪುವ ಚುಚ್ಚುಮದ್ದು ನೀಡಿ ಆತನ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷ ಪ್ರಿಯಾರನ್ನು ಉಳಿಸಿಕೊಳ್ಳಲು ಯೆಮೆನ್‌ನ ಸ್ಥಳೀಯ ಆಡಳಿತ ಹಾಗೂ ಇತರ ಆಪ್ತ ದೇಶಗಳ ಜೊತೆ ಸಂಪರ್ಕದಲ್ಲಿದ್ದೇವೆ.
ನವದೆಹಲಿ: ಯೆಮೆನ್ ಪ್ರಜೆಗೆ ಪ್ರಜ್ಞೆ ತಪ್ಪುವ ಚುಚ್ಚುಮದ್ದು ನೀಡಿ ಆತನ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷ ಪ್ರಿಯಾರನ್ನು ಉಳಿಸಿಕೊಳ್ಳಲು ಯೆಮೆನ್‌ನ ಸ್ಥಳೀಯ ಆಡಳಿತ ಹಾಗೂ ಇತರ ಆಪ್ತ ದೇಶಗಳ ಜೊತೆ ಸಂಪರ್ಕದಲ್ಲಿದ್ದೇವೆ.
ಸಾಧ್ಯವಿರುವ ಎಲ್ಲ ಪರಿಹಾರ ಮಾರ್ಗಗಳನ್ನೂ ಹುಡುಕುತ್ತಿದ್ದೇವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ. ‘ಸರ್ಕಾರ ಈ ಪ್ರಕರಣದಲ್ಲಿ ಸಾಧ್ಯವಿರುವ ಎಲ್ಲ ಸಹಾಯ ನೀಡುತ್ತಿದೆ. ನಿಮಿಷಾಳ ಕುಟುಂಬಕ್ಕೆ ವಕೀಲರನ್ನು ನೇಮಿಸಿದ್ದೇವೆ. ಸಮಸ್ಯೆಯನ್ನು ಪರಿಹರಿಸಲು ಸ್ಥಳೀಯ ಅಧಿಕಾರಿಗಳು ಮತ್ತು ಇತರ ಆಪ್ತ ದೇಶಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ’ ಎಂದು ತಿಳಿಸಿದ್ದಾರೆ.