ಸಾರಾಂಶ
ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಪ್ರಸಿದ್ಧ ಆಭರಣ ಮಳಿಗೆ ಸುರಾನಾ ಜ್ಯುವೆಲ್ಲರ್ಸ್‌ಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ 90 ಕೋಟಿ ರು.ಗೂ ಅಧಿಕ ಮೌಲ್ಯದ ಸರಕುಗಳನ್ನು ವಶಪಡಿಸಿಕೊಂಡಿದ್ದು, ಈ ಪೈಕಿ ಬರೋಬ್ಬರಿ 26 ಕೋಟಿ ರು. ನಗದು ಕೂಡ ಒಳಗೊಂಡಿದೆ.
ನಾಸಿಕ್: ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಪ್ರಸಿದ್ಧ ಆಭರಣ ಮಳಿಗೆ ಸುರಾನಾ ಜ್ಯುವೆಲ್ಲರ್ಸ್‌ಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ 90 ಕೋಟಿ ರು.ಗೂ ಅಧಿಕ ಮೌಲ್ಯದ ಸರಕುಗಳನ್ನು ವಶಪಡಿಸಿಕೊಂಡಿದ್ದು, ಈ ಪೈಕಿ ಬರೋಬ್ಬರಿ 26 ಕೋಟಿ ರು. ನಗದು ಕೂಡ ಒಳಗೊಂಡಿದೆ.
ಸುರಾನಾ ಆಭರಣ ಮಳಿಗೆಯ ವ್ಯವಸ್ಥಾಪಕ ಆದಾಯ ತೆರಿಗೆ ಇಲಾಖೆಗೆ ಲೆಕ್ಕವನ್ನು ಸಲ್ಲಿಸದೆ ವಹಿವಾಟುಗಳನ್ನು ನಡೆಸುತ್ತಿರುವ ಕುರಿತು ದೂರುಗಳು ಬಂದಿದ್ದ ಹಿನ್ನೆಲೆಯಲ್ಲಿ ದಾಳಿ ಮಾಡಿದ್ದ ಐಟಿ ಅಧಿಕಾರಿಗಳು ಭಾರೀ ಪ್ರಮಾಣದ ಹಣ ಹಾಗೂ ಸರಕುಗಳನ್ನು ವಶಪಡಿಸಿಕೊಂಡಿದ್ದಾರೆ.
ವ್ಯವಸ್ಥಾಪಕರಿಗೆ ಸಂಬಂಧಿಸಿದ ಇತರ ಸ್ಥಳಗಳ ಮೇಲೂ ದಾಳಿ ನಡೆಸಿದ ಅಧಿಕಾರಿಗಳಿಗೆ ಭಾರೀ ಪ್ರಮಾಣದ ನಗದು ಪತ್ತೆಯಾದ ಹಿನ್ನೆಲೆಯಲ್ಲಿ ಹಲವು ಮಂದಿಯನ್ನು ಕರೆಸಿ ನಗದು ಎಣಿಕೆ ಮಾಡಲಾಯಿತು. ಇದಕ್ಕೂ ಮೊದಲು ಮಹಾರಾಷ್ಟ್ರದ ನಾಂದೇಡ್‌ನಲ್ಲೂ ಸಹ ಐಟಿ ಅಧಿಕಾರಿಗಳು 170 ಕೋಟಿ ರು. ಮೌಲ್ಯದ ನಕಲಿ ಜಾಗವನ್ನು ವಶಪಡಿಸಿಕೊಂಡಿದ್ದರು.