ಸಾರಾಂಶ
ಲೋಕಸಭಾ ಚುನಾವಣೆಗೆ ಮಹಾರಾಷ್ಟ್ರದಲ್ಲಿ ಇಂಡಿಯಾ ಮೈತ್ರಿಕೂಟದ ಸೀಟು ಹಂಚಿಕೆ ಅಂತಿಮವಾಗಿದ್ದು, ಕಾಂಗ್ರೆಸ್‌ಗೆ 18 ಸ್ಥಾನ, ಶಿವಸೇನೆ 20 ಮತ್ತು ಎನ್‌ಸಿಪಿ ಶರದ್‌ಚಂದ್ರ ಪವಾರ್ ಪಕ್ಷ 10 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.
ಮುಂಬೈ: ಮುಂಬರುವ ಲೋಕಸಭಾ ಚುನಾವಣೆ ಸಂಬಂಧ ಮಹಾರಾಷ್ಟ್ರದ ಮಹಾವಿಕಾಸ ಅಘಾಡಿ ಮೈತ್ರಿಕೂಟದ ಪಕ್ಷಗಳು ತಮ್ಮ ಸೀಟು ಹಂಚಿಕೆ ಅಂತಿಮಗೊಳಿಸಿವೆ ಎನ್ನಲಾಗಿದೆ.
ಅದರನ್ವಯ ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ 20, ಕಾಂಗ್ರೆಸ್ 18 ಮತ್ತು ಶರದ್ ಪವಾರ್ ನೇತೃತ್ವದ ಎನ್‌ಸಿಪಿ 10 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ ಎನ್ನಲಾಗಿದೆ.ಕಳೆದ ಬಾರಿ ಶಿವಸೇನೆ 23 ಸ್ಥಾನಗಳಲ್ಲಿ ಸ್ಪರ್ಧಿಸಿತ್ತು. ಈ ಬಾರಿಯೂ ಅಷ್ಟೇ ಸೀಟು ತನಗೆ ಬೇಕೆಂದು ಅದು ಹಠ ಹಿಡಿದಿದ್ದ ಹಿನ್ನೆಲೆಯಲ್ಲಿ ಮಾತುಕತೆ ಜಠಿಲವಾಗಿತ್ತು. ಆದರೆ ಅಂತಿಮವಾಗಿ ಉದ್ಧವ್ ಬಣ ತನ್ನ ಪಟ್ಟು ಸಡಿಲಿಸಿದೆ.