ಸಾರಾಂಶ
ಲೋಕಸಭಾ ಚುನಾವಣೆಯಲ್ಲಿ ಗೆದ್ದ ನಂತರ ಪ್ರಧಾನಿ ಯಾರಾಗುತ್ತಾರೆ ಎಂದು ಇಂಡಿಯಾ ಮೈತ್ರಿಕೂಟ ನಿರ್ಧರಿಸುತ್ತದೆ ಎಂದು ಕಾಂಗ್ರೆಸ್ ನಾಯಕ ಮತ್ತು ವಯನಾಡು ಕ್ಷೇತ್ರದ ಕಾಂಗ್ರಸ್ ಅಭ್ಯರ್ಥಿ ರಾಹುಲ್ ಗಾಂಧಿ ಶುಕ್ರವಾರ ತಿಳಿಸಿದರು.
ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಗೆದ್ದ ನಂತರ ಪ್ರಧಾನಿ ಯಾರಾಗುತ್ತಾರೆ ಎಂದು ಇಂಡಿಯಾ ಮೈತ್ರಿಕೂಟ ನಿರ್ಧರಿಸುತ್ತದೆ ಎಂದು ಕಾಂಗ್ರೆಸ್ ನಾಯಕ ಮತ್ತು ವಯನಾಡು ಕ್ಷೇತ್ರದ ಕಾಂಗ್ರಸ್ ಅಭ್ಯರ್ಥಿ ರಾಹುಲ್ ಗಾಂಧಿ ಶುಕ್ರವಾರ ತಿಳಿಸಿದರು.
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಗಳನ್ನು ಬಿಡುಗಡೆ ಮಾಡಿದ ನಂತರ ಪತ್ರಕರ್ತರ ಪ್ರಶ್ನೆ ಉತ್ತರಿಸಿದ ಅವರು, ಪ್ರಧಾನಿ ಯಾರಾಗುತ್ತಾರೆ ಎಂಬುದನ್ನು ಸದ್ಯಕ್ಕೆ ಹೇಳಲಾಗುವುದಿಲ್ಲ. ಆದರೆ ಚುನಾವಣೆಯಲಲ್ಲಿ ಗೆದ್ದ ನಂತ ಇಂಡಿಯಾ ಮೈತ್ರಿಕೂಟದೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುತ್ತದೆ ಎಂದು ಹೇಳುವ ಮೂಲಕ ಈ ಬಾರಿಯ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಈ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಜಯ ಗಳಿಸಲಿದೆ. ಈ ಚುನಾವಣೆ ಪ್ರಮುಖವಾಗಿ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ನಾಶ ಮಾಡಲು ಹೊರಟಿರುವ ಶಕ್ತಿ ಹಾಗೂ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಪ್ರಯತ್ನಿಸುತ್ತಿರುವ ಶಕ್ತಿಯ ನಡುವೆ ನಡೆಯುವ ಚುನಾವಣೆಯಾಗಿದೆ ಎಂದರು.