ಭಾರತದಲ್ಲಿ ಇಮ್ರಾನ್ ಖಾನ್‌, ಭುಟ್ಟೋ ಎಕ್ಸ್‌ ಖಾತೆಗೆ ನಿರ್ಬಂಧ

| N/A | Published : May 05 2025, 12:53 AM IST / Updated: May 05 2025, 06:35 AM IST

ಭಾರತದಲ್ಲಿ ಇಮ್ರಾನ್ ಖಾನ್‌, ಭುಟ್ಟೋ ಎಕ್ಸ್‌ ಖಾತೆಗೆ ನಿರ್ಬಂಧ
Share this Article
  • FB
  • TW
  • Linkdin
  • Email

ಸಾರಾಂಶ

  ಮಾಜಿ ಪ್ರಧಾನಿ ಇಮ್ರಾನ್‌ ಖಾನ್ ಮತ್ತು ಮಾಜಿ ವಿದೇಶಾಂಗ ಸಚಿವ ಬಿಲಾವಾಲ್ ಭುಟ್ಟೋ ಎಕ್ಸ್‌ ಖಾತೆಗೆ ಕೇಂದ್ರ ಸರ್ಕಾರ ನಿರ್ಬಂಧ ವಿಧಿಸಿದೆ.

ನವದೆಹಲಿ:ಪಹಲ್ಗಾಂ ನರಮೇಧದ ಬಳಿಕ ಭಾರತದಲ್ಲಿ ಪಾಕ್ ಪ್ರಧಾನಿ ಶೆಹಬಾಜ್ ಸೇರಿದಂತೆ ಹಲವು ನಾಯಕರ ಸಾಮಾಜಿಕ ಜಾಲತಾಣ ಖಾತೆಗಳಿಗೆ ನಿಷೇಧ ಹೇರಿದ ಬೆನ್ನಲ್ಲೇ ಪಾಕ್ ಮಾಜಿ ಪ್ರಧಾನಿ ಇಮ್ರಾನ್‌ ಖಾನ್ ಮತ್ತು ಮಾಜಿ ವಿದೇಶಾಂಗ ಸಚಿವ ಬಿಲಾವಾಲ್ ಭುಟ್ಟೋ ಎಕ್ಸ್‌ ಖಾತೆಗೆ ಕೇಂದ್ರ ಸರ್ಕಾರ ನಿರ್ಬಂಧ ವಿಧಿಸಿದೆ.

ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ನಡುವೆ ಭಾರತ ವಿರೋಧಿ ಮತ್ತು ದುರುದ್ದೇಶಪೂರಿತ ವಿಷಯವನ್ನು ಈ ಇಬ್ಬರ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಲಾಗಿದೆ ಎನ್ನುವ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ.

ಭಾರತ ಈಗಾಗಲೇ ಪಾಕಿಸ್ತಾನ ಸರ್ಕಾರದ ಅಧಿಕೃತ ಖಾತೆ, ರಕ್ಷಣ ಸಚಿವ ಖ್ವಾಜಾ ಆಸಿಫ್‌ ಸೇರಿದಂತೆ ಹಲವು ಪಾಕಿಸ್ತಾನಿಯರ ಅಧಿಕೃತ ಎಕ್ಸ್ ಖಾತೆಯನ್ನು ನಿರ್ಬಂಧಿಸಿದೆ.