ಕೇಂದ್ರೀಯ ಸಂಸ್ಥೆ ದುರ್ಬಳಕೆ: ಚು. ಆಯೋಗಕ್ಕೆ ಇಂಡಿಯಾ ದೂರು

| Published : Mar 23 2024, 01:01 AM IST / Updated: Mar 23 2024, 09:03 AM IST

ಸಾರಾಂಶ

ಬಿಜೆಪಿಯು ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಚುನಾವಣೆಯ ಮುಂದೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಬಂಧಿಸಿದೆ ಎಂದು ಚುನಾವಣಾ ಆಯೋಗಕ್ಕೆ ಇಂಡಿಯಾ ಕುಟದ ನಅಯಕರು ದೂರು ನೀಡಿದ್ದಾರೆ.

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯವು ಬಂಧಿಸಿದ ಮರುದಿನವೇ, ಇಂಡಿಯಾ ಬ್ಲಾಕ್ ಪಕ್ಷಗಳ ನಾಯಕರ ನಿಯೋಗವು ಕೇಂದ್ರ ಸರ್ಕಾರವು ಕೇಂದ್ರೀಯ ತನಿಖಾ ಏಜೆನ್ಸಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಹಾಗೂ ವಿಪಕ್ಷಗಳನ್ನು ಹತ್ತಿಕ್ಕುತ್ತಿದೆ ಎಂದು ದೂರು ಸಲ್ಲಿಸಿದೆ.

ಇಂಡಿಯಾ ಅಂಗ ಪಕ್ಷದ ನಾಯಕರು ವಿರೋಧ ಪಕ್ಷಗಳನ್ನು ಗುರಿಯಾಗಿಸಿಕೊಂಡು ಕೇಂದ್ರೀಯ ಸಂಸ್ಥೆಗಳು ನಡೆಸಿರುವ ಇತ್ತೀಚಿನ ನಿದರ್ಶನಗಳ ಪಟ್ಟಿಯನ್ನು ಈ ವೇಖೆ ಸಲ್ಲಿಸಲಾಗಿದೆ ಹಾಗೂ ಚುನಾವಣೆಗೆ ಹೋಗಲು ನಿಷ್ಪಕ್ಷ ವೇದಿಕೆ ಇಲ್ಲವಾಗಿದೆ. 

ಹೀಗಾಗಿ ಚುನಾವಣೆ ಸಂದರ್ಭದಲ್ಲಿ ತನಿಖಾ ಸಂಸ್ಥೆಗಳ ಮುಖ್ಯಸ್ಥರನ್ನು ಚುನಾವಣಾ ಆಯೋಗವು ಬದಲಿಸಿ ನ್ಯಾಯಯುತವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಇಂಡಿಯಾ ಕೂಟದ ನಿಯೋಗ ಆಗ್ರಹಿಸಿದೆ ಎಂದು ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಹೇಳಿದ್ದಾರೆ.