ಸಾರಾಂಶ
ನವದೆಹಲಿ: ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವಾಯುದಾಳಿ ನಡೆಸಿ 40ಕ್ಕೂ ಹೆಚ್ಚಿನ ಜನರನ್ನು ಬಲಿ ಪಡೆದ ಬಗ್ಗೆ ಭಾರತ ತೀವ್ರವಾಗಿ ಖಂಡಿಸಿದ್ದು, ಪಾಕಿಸ್ತಾನವು ತನ್ನ ವೈಫಲ್ಯತೆಯನ್ನು ಮುಚ್ಚಿಕೊಳ್ಳಲು ನೆರೆಹೊರೆಯವರ ಮೇಲೆ ದಾಳಿ ಮಾಡುತ್ತಿದೆ ಎಂದು ಹೇಳಿದೆ.

ಭಾರತದ ವಿದೇಶಾಂಗ ವಕ್ತಾರ ರಣಧೀರ್ ಜೈಸ್ವಾಲ್ ಮಾತನಾಡಿ, ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವಾಯು ದಾಳಿ ನಡೆಸಿ, ಅನೇಕ ಮಹಿಳೆಯರು, ಮಕ್ಕಳು ಮತ್ತು ಜೀವಗಳನ್ನು ಬಲಿ ಪಡೆದಿದೆ ಎಂಬ ಮಾಧ್ಯಮಗಳ ವರದಿಯನ್ನು ನಾವು ಗಮನಿಸಿದ್ದೇವೆ. ಪಾಕಿಸ್ತಾನದ ಈ ನಡೆಯನ್ನು ಭಾರತ ಸಾರಾಸಗಟಾಗಿ ಖಂಡಿಸುತ್ತದೆ. ಪಾಕಿಸ್ತಾನವು ತನ್ನ ಆಂತರಿಕ ವೈಫಲ್ಯವನ್ನು ಮರೆ ಮಾಡಲು ನೆರೆಹೊರೆಯವರ ಮೇಲೆ ಹೊಣೆ ಹೊರಿಸಲಿದೆ ಎಂದು ಹೇಳಿದರು.