ಸಾರಾಂಶ
ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಬೂದಿ ಮುಚ್ಚಿದ ಕೆಂಡದಂತಿರುವ ಹೊತ್ತಿನಲ್ಲಿ, ಭಾರತದಲ್ಲಿರುವ ಪಾಕ್ ದೂತಾವಾಸದ ಅಧಿಕಾರಿಯೊಬ್ಬರಿಗೆ ದೇಶ ತೊರೆಯುವಂತೆ ಸರ್ಕಾರ ಆದೇಶಿಸಿದೆ ಹಾಗೂ ಅದಕ್ಕೆ 1 ದಿನ ಕಾಲಾವಕಾಶ ನೀಡಿದೆ.
ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಬೂದಿ ಮುಚ್ಚಿದ ಕೆಂಡದಂತಿರುವ ಹೊತ್ತಿನಲ್ಲಿ, ಭಾರತದಲ್ಲಿರುವ ಪಾಕ್ ದೂತಾವಾಸದ ಅಧಿಕಾರಿಯೊಬ್ಬರಿಗೆ ದೇಶ ತೊರೆಯುವಂತೆ ಸರ್ಕಾರ ಆದೇಶಿಸಿದೆ ಹಾಗೂ ಅದಕ್ಕೆ 1 ದಿನ ಕಾಲಾವಕಾಶ ನೀಡಿದೆ.
ತಮ್ಮ ಅಧಿಕಾರ ವ್ಯಾಪ್ತಿಗೆ ಒಳಪಡದ ಚಟುವಟಿಕೆಗಳಲ್ಲಿ ತೊಡಗಿರುವ ಕಾರಣ, ಭಾರತ ಬಿಡುವಂತೆ ಆದೇಶಿಸಲಾಗಿದ್ದು, ಭಾರತದಲ್ಲಿರುವ ಯಾವೊಬ್ಬ ಪಾಕ್ ರಾಜತಾಂತ್ರಿಕನೂ ತನ್ನ ಅಧಿಕಾರದ ದುರ್ಬಳಕೆ ಮಾಡದಂತೆ ಎಚ್ಚರವಹಿಸಲು ಸೂಚಿಸಲಾಗಿದೆ. 8 ದಿನ ಹಿಂದಷ್ಟೇ ಪಾಕ್ ದೂತಾವಾಸದ ಅಧಿಕಾರಿಯೊಬ್ಬರಿಗೆ ದೇಶ ತೊರೆಯುವಂತೆ ಸೂಚಿಸಲಾಗಿತ್ತು.