ಉಗ್ರವಾದದ ವಿರುದ್ಧದ ಹೋರಾಟದಲ್ಲಿ ಭಾರತ ಮತ್ತು ರಷ್ಯಾ ಒಟ್ಟಿಗೆ ಹೆಜ್ಜೆ ಹಾಕುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಉಗ್ರವಾದದ ವಿರುದ್ಧದ ಹೋರಾಟದಲ್ಲಿ ಭಾರತ ಮತ್ತು ರಷ್ಯಾ ಒಟ್ಟಿಗೆ ಹೆಜ್ಜೆ ಹಾಕುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಉಗ್ರವಾದದ ವಿರುದ್ಧದ ಹೋರಾಟದಲ್ಲಿ ಭಾರತ ಮತ್ತು ರಷ್ಯಾ ಬಹಳ ಹಿಂದಿನಿಂದಲೂ ಹೆಗಲಿಗೆ ಹೆಗಲು ಕೊಟ್ಟು ನಿಂತಿವೆ. ಅದು ಪಹಲ್ಗಾಂ ದಾಳಿಯಾಗಿರಲಿ ಅಥವಾ ಕ್ರೋಕಸ್ ಸಿಟಿ ಹಾಲ್ ಮೇಲಿನ ದಾಳಿಯಾಗಿರಲಿ - ಈ ಎಲ್ಲಾ ಘಟನೆಗಳ ಮೂಲ ಒಂದೇ. ಉಗ್ರವಾದವು ಮಾನವೀಯತೆಯ ಮೇಲಿನ ನೇರ ದಾಳಿ ಎಂಬುದು ಭಾರತದ ಅಚಲವಾದ ನಂಬಿಕೆ. ಭಾರತ ಮತ್ತು ರಷ್ಯಾ ಉಗ್ರವಾದದ ವಿರುದ್ಧ ಒಟ್ಟಿಗೆ ಹೆಜ್ಜೆ ಹಾಕುತ್ತವೆ’ ಎಂದರು. ಈ ಹಿಂದೆ ಪಹಲ್ಗಾಂ ದಾಳಿಯನ್ನು ರಷ್ಯಾ ಖಂಡಿಸಿತ್ತು.