ಶಿಕ್ಷಣ ವ್ಯವಸ್ಥೆಯ ಮೇಲೆ ಆರ್‌ಎಸ್‌ಎಸ್‌ ಸಂಪೂರ್ಣ ನಿಯಂತ್ರಣ ಸಾಧಿಸಿದರೆ, ಯಾರಿಗೂ ಉದ್ಯೋಗ ಸಿಗದಂತಾಗಿ ದೇಶವೇ ನಾಶವಾಗುತ್ತದೆ’ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ನವದೆಹಲಿ: ಶಿಕ್ಷಣ ವ್ಯವಸ್ಥೆಯ ಮೇಲೆ ಆರ್‌ಎಸ್‌ಎಸ್‌ ಸಂಪೂರ್ಣ ನಿಯಂತ್ರಣ ಸಾಧಿಸಿದರೆ, ಯಾರಿಗೂ ಉದ್ಯೋಗ ಸಿಗದಂತಾಗಿ ದೇಶವೇ ನಾಶವಾಗುತ್ತದೆ’ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ಇಂಡಿಯಾ ಕೂಟದ ಅಂಗಸಂಸ್ಥೆಯಾದ ವಿದ್ಯಾರ್ಥಿಗಳ ಸಂಘಟನೆ ಜಂತರ್‌ ಮಂತರ್‌ನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ) ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಸಿದ ರಾಹುಲ್‌, ‘ನಮ್ಮ ಕೂಟದಲ್ಲಿ ಸೈದ್ಧಾಂತಿಕ ಭಿನ್ನತೆಗಳಿರಬಹುದು. ಆದರೆ ದೇಶದ ಶಿಕ್ಷಣ ವ್ಯವಸ್ಥೆಯೊಂದಿಗೆ ರಾಜಿ ಮಾಡಿಕೊಳ್ಳುವುದಿಲ್ಲ’ ಎಂದರು.

ಇದೇ ವೇಳ ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘ದೇಶದ ವಿಶ್ವವಿದ್ಯಾಲಯಗಳ ಕುಲಪತಿಗಳು ಸಂಘದ ಪ್ರಾಬಲ್ಯ ಹೊಂದಿದ್ದಾರೆ. ಮುಂದೆ ರಾಜ್ಯಗಳ ವಿವಿಗಳ ಕುಲಪತಿಗಳನ್ನೂ ಆರ್‌ಎಸ್‌ಎಸ್‌ ಶಿಫಾರಸಿನಂತೆಯೇ ನೇಮಿಸಲಾಗುವುದು. ಇದನ್ನು ತಡೆಯಬೇಕು’ ಎಂದು ಕರೆ ನೀಡಿದ್ದಾರೆ.

ತಮಿಳುನಾಡಿನಲ್ಲಿ ಎನ್‌ಇಪಿ ಜಾರಿಗೊಳಿಸುವುದಿಲ್ಲ ಎಂದು ಸಿಎಂ ಇಂಡಿಯಾ ಕೂಟದ ಭಾಗವಾದ ಎಂ.ಕೆ.ಸ್ಟಾಲಿನ್‌ ಸರ್ಕಾರ ಈ ಹಿಂದೆ ಹೇಳಿತ್ತು.