ಕೇಂದ್ರದ ಮಾಜಿ ನಾಗರಿಕ ವಿಮಾನಯಾನ ಸಚಿವ ಹಾಗೂ ಎನ್‌ಸಿಪಿ (ಅಜಿತ್‌ ಪವಾರ್‌ ಬಣ) ನಾಯಕ ಪ್ರಫುಲ್ ಪಟೇಲ್ ಒಳಗೊಂಡಿರುವ ಆರೋಪದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮುಕ್ತಾಯದ ವರದಿಯನ್ನು ಸಲ್ಲಿಸಿದೆ

ಮುಂಬೈ: ಕೇಂದ್ರದ ಮಾಜಿ ನಾಗರಿಕ ವಿಮಾನಯಾನ ಸಚಿವ ಹಾಗೂ ಎನ್‌ಸಿಪಿ (ಅಜಿತ್‌ ಪವಾರ್‌ ಬಣ) ನಾಯಕ ಪ್ರಫುಲ್ ಪಟೇಲ್ ಒಳಗೊಂಡಿರುವ ಆರೋಪದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮುಕ್ತಾಯದ ವರದಿಯನ್ನು ಸಲ್ಲಿಸಿದೆ. ಪ್ರಕರಣವು 2017ರಷ್ಟು ಹಳೆಯದಾಗಿದ್ದು, ಏರ್‌ ಇಂಡಿಯಾ ಹಾಗೂ ಇಂಡಿಯನ್‌ ಏರ್‌ಲೈನ್ಸ್‌ ವಿಮಾನಗಳ ಲೀಸ್‌ನಲ್ಲಿ ಅಕ್ರಮ ನಡೆದಿದೆ ಎಂದು ತನಿಖೆ ನಡೆಸಲಾಗುತ್ತಿತ್ತು.

ಪಟೇಲ್ ಈಗ ಅಜಿತ್ ಪವಾರ್ ಎನ್‌ಸಿಪಿಯ ಭಾಗವಾಗಿದ್ದು ಅದು ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ - ಬಿಜೆಪಿ ಮೈತ್ರಿಕೂಟದ ಭಾಗವಾಗಿದ್ದಾರೆ. ಇದರ ಬೆನ್ನಲ್ಲೇ ಅವರ ತನಿಖಾ ಮುಕ್ತಾಯ ವರದಿ ಸಲ್ಲಿಸಿರುವುದು ಗಮನಾರ್ಹವಾಗಿದೆ.