ಬ್ಲಡ್‌ ಮನಿ ಕೊಟ್ಟು ಭಾರತದಿಂದ ತೈಲ ಖರೀದಿ : ನವರೋ

| N/A | Published : Sep 09 2025, 01:00 AM IST

ಬ್ಲಡ್‌ ಮನಿ ಕೊಟ್ಟು ಭಾರತದಿಂದ ತೈಲ ಖರೀದಿ : ನವರೋ
Share this Article
  • FB
  • TW
  • Linkdin
  • Email

ಸಾರಾಂಶ

ಭಾರತ ತಮ್ಮ ಶೇ.50 ತೆರಿಗೆಗೂ ಬಗ್ಗದ ಕಾರಣ ಹತಾಶರಾಗಿರುವ ಅಮೆರಿಕದ ಅಧ್ಯಕ್ಷ ಟ್ರಂಪ್‌ರ ವ್ಯಾಪಾರ ಸಲಹೆಗಾರ ಪೀಟರ್‌ ನವರೋ, ‘ಭಾರತವು ಬ್ಲಡ್‌ ಮನಿ ನೀಡಿ ರಷ್ಯಾದಿಂದ ತೈಲ ಖರೀದಿಸುತ್ತಿದೆ’ ಎಂದಿದ್ದಾರೆ.

ವಾಷಿಂಗ್ಟನ್‌: ಭಾರತ ತಮ್ಮ ಶೇ.50 ತೆರಿಗೆಗೂ ಬಗ್ಗದ ಕಾರಣ ಹತಾಶರಾಗಿರುವ ಅಮೆರಿಕದ ಅಧ್ಯಕ್ಷ ಟ್ರಂಪ್‌ರ ವ್ಯಾಪಾರ ಸಲಹೆಗಾರ ಪೀಟರ್‌ ನವರೋ, ‘ಭಾರತವು ಬ್ಲಡ್‌ ಮನಿ ನೀಡಿ ರಷ್ಯಾದಿಂದ ತೈಲ ಖರೀದಿಸುತ್ತಿದೆ’ ಎಂದಿದ್ದಾರೆ. 

ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ನವರೋ, ‘ಉಕ್ರೇನ್‌ ಮೇಲೆ ರಷ್ಯಾ ಆಕ್ರಮಣ ಮಾಡುವುದಕ್ಕೂ ಮುನ್ನ ಭಾರತ ರಷ್ಯಾದ ತೈಲವನ್ನು ಇಷ್ಟು ಪ್ರಮಾಣದಲ್ಲಿ ತರಿಸುತ್ತಿರಲಿಲ್ಲ. ಅಲ್ಲಿ(ಉಕ್ರೇನ್‌ನಲ್ಲಿ) ಜನ ಸಾಯುತ್ತಿದ್ದರೂ ಭಾರತ ಬ್ಲಡ್‌ ಮನಿ(ಕೊಲೆಯಾದವರ ಕಡೆಯವರಿಗೆ ಪರಿಹಾರವಾಗಿ ನೀಡುವ ಹಣ) ನೀಡಿ ತೈಲ ಖರೀದಿ ಮುಂದುವರೆಸಿದೆ’ ಎಂದು ಹೇಳಿದ್ದಾರೆ. ಅತ್ತ ಭಾರತದ ತೈಲ ಖರೀದಿ ಬಗ್ಗೆ ನವರೋ ಹೇಳಿಕೆ ಸುಳ್ಳು ಎಂದ ಎಕ್ಸ್‌ ಮೇಲೂ ಅವರು ಅಸಮಾಧಾನ ಹೊರಹಾಕಿದ್ದಾರೆ.

Read more Articles on