ಸಾರಾಂಶ
ಚುನಾವಣಾ ಬಾಂಡ್ ಯೋಜನೆ ಭಾರತದ ಅತಿದೊಡ್ಡ ಹಗರಣ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ತಿಳಿಸಿದ್ದಾರೆ.
ಪಾಲ್ಘರ್: ಚುನಾವಣಾ ಬಾಂಡ್ ಯೋಜನೆ ಭಾರತದ ಅತಿದೊಡ್ಡ ಹಗರಣವಾಗಿದ್ದು, ಚುನಾವಣಾ ಆಯೋಗ (ಇಸಿ) ಹಂಚಿಕೊಂಡ ಮಾಹಿತಿ ಅಪೂರ್ಣವಾಗಿರುವುದರಿಂದ ಜನತಾ ನ್ಯಾಯಾಲಯದ ಮೊರೆ ಹೋಗುತ್ತೇವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.
ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಾಡಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ವಿದ್ಯುನ್ಮಾನ ಮತಯಂತ್ರ (ಇವಿಎಂ) ವಿರೋಧಿಯಲ್ಲ, ಆದರೆ ಮತವನ್ನು ಸರಿಯಾಗಿ ಚಲಾಯಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ಮತದಾನ ಪ್ರಕ್ರಿಯೆಯಲ್ಲಿ ಮತದಾರ ಪರಿಶೀಲಿಸಬಹುದಾದ ಪೇಪರ್ ಆಡಿಟ್ ಟ್ರಯಲ್ (ವಿವಿಪಿಎಟಿ) ಬಳಕೆಯನ್ನು ಬಯಸುತ್ತದೆ ಎಂದರು.