ಜಾಮೀನು ಕೋರಿ ಸುಪ್ರೀಂ ಕೋರ್ಟ್‌ಗೆ ಮಾಜಿ ಸಿಎಂ ಸೊರೇನ್‌

| Published : May 07 2024, 01:05 AM IST / Updated: May 07 2024, 06:53 AM IST

ಸಾರಾಂಶ

ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಹೇಮಂತ್‌ ಸೋರೆನ್‌ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ನವದೆಹಲಿ: ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನವಾಗಿರುವ ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ತಮ್ಮ ಜಾಮೀನು ಅರ್ಜಿಯನ್ನುಜಾರ್ಖಂಡ್‌ ಹೈಕೋರ್ಟ್‌ ತಿರಸ್ಕರಿಸಿದ್ದನ್ನು ಪ್ರಶ್ನಸಿ ಸೋಮವಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಜಾರ್ಖಂಡ್ ಹೈಕೋರ್ಟ್ ಸೊರೇನ್‌ ಜಾಮೀನು ಅರ್ಜಿಯನ್ನು ಶುಕ್ರವಾರ ತಿರಸ್ಕರಿಸಿತ್ತು. ಇದರ ಬೆನ್ನಲ್ಲೇ ಅವರು ಸುಪ್ರಿಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಸೊರೇನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ನ್ಯಾ। ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠದ ಮುಂದೆ ತುರ್ತಾಗಿ ಅರ್ಜಿಯನ್ನು ವಿಚಾರಣೆ ನಡೆಸಬೇಕೆಂದು ಕೋರಿದರು.

ಇ.ಡಿ. ಸೊರೇನ್‌ ಅವರನ್ನು ಜನವರಿ 31 ರಂದು ಬಂಧಿಸಿತ್ತು.