ಸಾರಾಂಶ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಭಾನುವಾರ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಭಾನುವಾರ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರೊಂದಿಗೆ ಇದೀಗ ಎಲ್ಲರ ಕುತೂಹಲ, ಬಿಜೆಪಿ ಮುಂದಿನ ಅಧ್ಯಕ್ಷರು ಯಾರಾಗಬಹುದು ಎಂಬುದರತ್ತ ತಿರುಗಿದೆ.
2014-19ರ ಅವಧಿಗೆ ಕೇಂದ್ರ ಆರೋಗ್ಯ ಖಾತೆ ಸಚಿವರಾಗಿದ್ದ ನಡ್ಡಾರನ್ನು 2020ರಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿತ್ತು. 2022ರಲ್ಲಿ ನಡ್ಡಾ ಅವಧಿ ಮುಕ್ತಾಯವಾಗಬೇಕಿತ್ತಾದರೂ, 2024ರ ಲೋಕಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಅವರ ಅವಧಿಯನ್ನು ವಿಸ್ತರಣೆ ಮಾಡಲಾಗಿತ್ತು. ಇದೀಗ ಲೋಕಸಭಾ ಚುನಾವಣೆ ಮುಕ್ತಾಯಗೊಂಡು ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದರೊಂದಿಗೆ ನಡ್ಡಾ ಅಧ್ಯಕ್ಷೀಯ ಅವಧಿಯು ಅಂತ್ಯದತ್ತ ಸಾಗಿದೆ.
ನಡ್ಡಾ ಸ್ಥಾನಕ್ಕೆ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್‌ಸಿಂಗ್ ಚೌಹಾಣ್ ಅವರ ಹೆಸರು ಬಲವಾಗಿ ಕೇಳಿಬಂದಿತ್ತಾದರೂ, ಅವರು ಕೂಡಾ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕಾರಣ, ಮುಂದಿನ ಅಧ್ಯಕ್ಷರ ಕುರಿತ ಕುತೂಹಲ ಮತ್ತಷ್ಟು ಹೆಚ್ಚಿದೆ.