ಸಾರಾಂಶ
ಚುನಾವಣಾ ಬಾಂಡ್ ರದ್ಧತಿ, 370 ವಿಧಿ ರದ್ಧತಿ ಎತ್ತಿಹಿಡಿದಂತಹ ಪ್ರಮುಖ ವಿಷಯಗಳ ತೀರ್ಪು ಪ್ರಕಟಿಸಿದ್ದ ನ್ಯಾ। ಸಂಜೀವ್ ಖನ್ನಾ ಅವರು ಸುಪ್ರೀಂ ಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ನ.11ರ ಸೋಮವಾರ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ನವದೆಹಲಿ: ಚುನಾವಣಾ ಬಾಂಡ್ ರದ್ಧತಿ, 370 ವಿಧಿ ರದ್ಧತಿ ಎತ್ತಿಹಿಡಿದಂತಹ ಪ್ರಮುಖ ವಿಷಯಗಳ ತೀರ್ಪು ಪ್ರಕಟಿಸಿದ್ದ ನ್ಯಾ। ಸಂಜೀವ್ ಖನ್ನಾ ಅವರು ಸುಪ್ರೀಂ ಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ನ.11ರ ಸೋಮವಾರ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಬೆಳಗ್ಗೆ 10 ಗಂಟೆಗೆ ನಡೆಯುವ ಸಮಾರಂಭದಲ್ಲಿ ನೂತನ ಮುಖ್ಯ ನ್ಯಾಯಮೂರ್ತಿಗಳಿಗೆ ಪ್ರಮಾಣವಚನ ಬೋಧಿಸಲಿದ್ದಾರೆ. ನಿರ್ಗಮಿತ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರಿಂದ ತೆರವಾದ ಸ್ಥಾನಕ್ಕೆ ಈಗ ಖನ್ನಾ ಏರುತ್ತಿದ್ದು, ಮೇ 13, 2025ರವರೆಗೆ ಅಧಿಕಾರದಲ್ಲಿರಲಿದ್ದಾರೆ.
ನ್ಯಾ. ಖನ್ನಾ ಅವರ ತಂದೆ ದೇವ್‌ರಾಜ್ ಖನ್ನಾ ಕೂಡ ದೆಹಲಿ ಹೈಕೋರ್ಟ್‌ನಲ್ಲಿ, ಚಿಕ್ಕಪ್ಪ ಎಚ್.ಆರ್. ಖನ್ನಾ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))