ಸಾರಾಂಶ
ಈ ಬಾರಿ ಕೆಎಸ್‌ಸಿಎ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಮೈಸೂರು ವಾರಿಯರ್ಸ್ ತಂಡವನ್ನು ತಾರಾ ಕ್ರಿಕೆಟಿಗ ಕರುಣ್ ನಾಯರ್ ಮುನ್ನಡೆಸಲಿದ್ದಾರೆ.
ಮೈಸೂರು : ಈ ಬಾರಿ ಕೆಎಸ್‌ಸಿಎ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಮೈಸೂರು ವಾರಿಯರ್ಸ್ ತಂಡವನ್ನು ತಾರಾ ಕ್ರಿಕೆಟಿಗ ಕರುಣ್ ನಾಯರ್ ಮುನ್ನಡೆಸಲಿದ್ದಾರೆ.
ಶನಿವಾರ ಖಾಸಗಿ ಹೋಟೆಲ್‌ನಲ್ಲಿ ತಂಡ ನಾಯಕ ಹಾಗೂ ಆಟಗಾರರನ್ನು ಘೋಷಿಸಿತು. ಇಂಗ್ಲೆಂಡ್ ವಿರುದ್ಧ 5ನೇ ಟೆಸ್ಟ್ ಪಂದ್ಯದಲ್ಲಿ ಕರುಣ್ ಕೈ ಬೆರಳಿಗೆ ಗಾಯವಾಗಿರುವುದರಿಂದ, ಟೂರ್ನಿಯ ಆರಂಭಿಕ ಕೆಲ ಪಂದ್ಯಗಳಲ್ಲಿ ಮನೀಶ್ ಪಾಂಡೆ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ತಂಡದ ಮಾಲೀಕ ಅರ್ಜುನ್ ರಂಗ ತಿಳಿಸಿದರು. ಟೂರ್ನಿ ಆ.11ರಿಂದ 27ರ ವರೆಗೆ ಮೈಸೂರಿನಲ್ಲಿ ನಡೆಯಲಿದೆ.