ದಿಲ್ಲಿ ಅಬಕಾರಿ ಹಗರಣ: ಬಿಆರ್‌ಎಸ್‌ ನಾಯಕಿ ಕವಿತಾ ಜಾಮೀನು ಅರ್ಜಿ ವಜಾ

| Published : May 07 2024, 01:01 AM IST / Updated: May 07 2024, 07:46 AM IST

ದಿಲ್ಲಿ ಅಬಕಾರಿ ಹಗರಣ: ಬಿಆರ್‌ಎಸ್‌ ನಾಯಕಿ ಕವಿತಾ ಜಾಮೀನು ಅರ್ಜಿ ವಜಾ
Share this Article
  • FB
  • TW
  • Linkdin
  • Email

ಸಾರಾಂಶ

ದಿಲ್ಲಿ ಅಬಕಾರಿ ಹಗರಣದಲ್ಲಿ ಬಿಆರ್‌ಎಸ್‌ ನಾಯಕಿ ಕವಿತಾ ಅವರ ಜಾಮೀನು ಅರ್ಜಿ ವಜಾ ಮಾಡಿ ದಿಲ್ಲಿ ಇಡಿ ನ್ಯಾಯಾಲಯ ಆದೇಶಿಸಿದೆ.

ನವದೆಹಲಿ: ದೆಹಲಿ ಅಬಕಾರಿ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತ ಆಗಿರುವ ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆಸಿಆರ್‌ ಅವರ ಪುತ್ರಿ ಹಾಗೂ ಬಿಆರ್‌ಎಸ್‌ ಪಕ್ಷದ ನಾಯಕಿ ಕೆ. ಕವಿತಾ ಅವರು ಸಲ್ಲಿಸಿದ ಜಾಮೀನು ಅರ್ಜಿಯನ್ನು ದಿಲ್ಲಿ ಇ.ಡಿ. ಕೋರ್ಟ್‌ ವಜಾಗೊಳಿಸಿದೆ.

ಸಿಬಿಐ ಮತ್ತು ಇ.ಡಿ. ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಕವಿತಾ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ. ಇದರಿಂದ ಲೋಕಸಭೆ ಚುನಾವಣೆ ಹೊತ್ತಲ್ಲಿ ಬಿಡುಗಡೆ ನಿರೀಕ್ಷೆಯಲ್ಲಿದ್ದ ಕವಿತಾಗೆ ನಿರಾಸೆಯಾಗಿದೆ.

ಮಾ.15ರಂದು ಬಂಧನವಾಗಿದ್ದ ಕವಿತಾ, ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ ಹಾಗೂ ತಿಹಾರ್‌ ಜೈಲಲ್ಲಿ ವಾಸವಾಗಿದ್ದಾರೆ.