ಸಾರಾಂಶ
ದೆಹಲಿಯ ಅಬಕಾರಿ ನೀತಿ ಹಗರಣದ ವಿಚಾರಣೆಗೆ ಹಾಜರಾಗುವಂತೆ ಬಿಆರ್‌ಎಸ್ ನಾಯಕಿ ಕವಿತಾಗೆ ಇಡಿ ಸಮನ್ಸ್ ನೀಡಿದ್ದು, ಕವಿತಾ ಗೈರಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ನವದೆಹಲಿ: ದೆಹಲಿಯ ಅಬಕಾರಿ ನೀತಿ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಆರ್‌ಎಸ್ ನಾಯಕಿ ಹಾಗೂ ತೆಲಂಗಾಣ ಮಾಜಿ ಸಿಎಂ ಕೆ. ಚಂದ್ರಶೇಖರ್ ರಾವ್ ಪುತ್ರಿ ಕೆ. ಕವಿತಾ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇಡಿ) ಮತ್ತೆ ಸಮನ್ಸ್ ಜಾರಿ ಮಾಡಿದೆ.
ದೆಹಲಿಯಲ್ಲಿರುವ ಇಡಿ ಕಚೇರಿಗೆ ಮಂಗಳವಾರ ಹಾಜರಾಗುವಂತೆ ಕವಿತಾಗೆ ಸಮನ್ಸ್‌ನಲ್ಲಿ ಸೂಚಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.ಅದಾಗ್ಯೂ ಕವಿತಾ ತಾವು ವಿಚಾರಣೆಗೆ ಗೈರಾಗುವ ಸಾಧ್ಯತೆ ಇದ್ದು, ತಮ್ಮ ಯಾವುದೇ ನಿರ್ಧಾರವನ್ನು ಅವರು ಇ-ಮೇಲ್ ಮೂಲಕ ಇಡಿಗೆ ತಿಳಿಸಲಿದ್ದಾರೆ ಎನ್ನಲಾಗಿದೆ.