ಇಂದು ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ?

| Published : May 07 2024, 01:00 AM IST / Updated: May 07 2024, 07:53 AM IST

aravind kejriwal

ಸಾರಾಂಶ

ಅರವಿಂದ್‌ ಕೇಜ್ರಿವಾಲ್‌ಗೆ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ನೀಡುವ ಕುರಿತ ವಿಚಾರಣೆಯನ್ನು ನ್ಯಾಯಾಲಯ ಇಂದು ವಿಚಾರಣೆ ನಡೆಸಲಿದೆ.

ನವದೆಹಲಿ: ಅಬಕಾರಿ ಹಗರಣದಲ್ಲಿ ಬಂಧನಕ್ಕೊಳಗಾಗಿ ತಿಹಾರ ಜೈಲಿನಲ್ಲಿರುವ ಅರವಿಂದ್ ಕೇಜ್ರಿವಾಲ್ ತಮ್ಮ ಬಂಧನ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಜಾಮೀನು ಅರ್ಜಿ ತೀರ್ಪು ಮಂಗಳವಾರ ಪ್ರಕಟಗೊಳ್ಳಲಿದೆ.

ಮೇ 3ರಂದು ಆಪ್ ಮುಖ್ಯಸ್ಥ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ‘ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡುವುದರ ಬಗ್ಗೆ ಪರಿಗಣಿಸಬಹುದು.

ಆದರೆ ಅಂತಿಮವಾಗಿ ತಾನೂ ಏನನ್ನೂ ಹೇಳಿಲ್ಲ.

ವಿಚಾರಣೆ ಶೀಘ್ರವೇ ಮುಕ್ತಾಯಗೊಳ್ಳುವ ಸಾಧ್ಯತೆಯಿಲ್ಲದಿದ್ದರೆ ಮಧ್ಯಂತರ ಜಾಮೀನನ್ನು ಪರಿಗಣಿಸಬಹುದು’ ಎಂದು ಹೇಳಿ ತನ್ನ ತೀರ್ಪನ್ನು ಮಂಗಳವಾರಕ್ಕೆ ಮುಂದೂಡಿಕೆ ಮಾಡಿತ್ತು.

ಇಂದು ಆ ತೀರ್ಪು ಪ್ರಕಟವಾಗಲಿದೆ. ಮಾ.21 ರಿಂದ ಬಂಧನದಲ್ಲಿರುವ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ಸಿಗುತ್ತದೆಯೋ ಅಥವಾ ತಿಹಾರ ಜೈಲುವಾಸ ಮುಂದುವರೆಯಲಿದೆಯೇ ಎಂಬ ಕುತೂಹಲ ಮೂಡಿದೆ.