ಸಾರಾಂಶ
ತಮಗೆ ಆರೋಗ್ಯ ಸಂಬಂಧಿ ಪರೀಕ್ಷೆ ಮಾಡಿಸಿಕೊಳ್ಳಬೇಕಿರುವ ಹಿನ್ನೆಲೆಯಲ್ಲಿ ಒಂದು ವಾರ ಜಾಮೀನು ಅವಧಿ ವಿಸ್ತರಿಸುವಂತೆ ನ್ಯಾಯಾಲಯದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿದ್ದಾರೆ.
ನವದೆಹಲಿ: ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ತಮಗೆ ನೀಡಲಾಗಿರುವ ಜಾಮೀನನ್ನು ಮತ್ತೆ ಏಳು ದಿನಗಳ ಅವಧಿಗೆ ವಿಸ್ತರಿಸಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ದಿಢೀರ್ ದೇಹದ ತೂಕ ನಷ್ಟವಾಗುತ್ತಿದೆ. ಹೆಚ್ಚಿನ ಕಿಟೋನ್ ಮಟ್ಟದ ಸಮಸ್ಯೆಯಿಂದ ಬಳಲುತ್ತಿದ್ದು ಪಿಇಟಿ-ಸಿಟಿ ಸ್ಕ್ಯಾನ್ ಒಳಗಾಗಲು ಜಾಮೀನು ಅವಧಿಯನ್ನು ವಾರದ ತನಕ ಮುಂದೂಡಿ ಎಂದು ನ್ಯಾಯಾಲಯಕ್ಕೆ ದೆಹಲಿ ಸಿಎಂ ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು ಮೇ.26ರಂದು ಈ ಬಗ್ಗೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವ ಅರವಿಂದ್ ಕೇಜ್ರಿವಾಲ್ ಜೂ.9ಕ್ಕೆ ಶರಣಾಗುವುದಾಗಿ ಹೇಳಿದ್ದಾರೆ.