ಸಾರಾಂಶ
ದೆಹಲಿ ಅಬಕಾರಿ ಹಗರಣದಲ್ಲಿ ಬಂಧಿತರಾಗಿ ತಿಹಾರ್ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸಕ್ಕರೆ ಕಾಯಿಲೆ ಇದ್ದರೂ ವೈದ್ಯಕೀಯ ಜಾಮೀನು ಪಡೆಯುವ ಸಲುವಾಗಿ ಮಾವಿನ ಹಣ್ಣು ಮತ್ತು ಸಿಹಿ ಪದಾರ್ಧಗಳನ್ನೆ ಹೆಚ್ಚಾಗಿ ತಿನ್ನುತ್ತಿದ್ದಾರೆ.
ನವದೆಹಲಿ: ದೆಹಲಿ ಅಬಕಾರಿ ಹಗರಣದಲ್ಲಿ ಬಂಧಿತರಾಗಿ ತಿಹಾರ್ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸಕ್ಕರೆ ಕಾಯಿಲೆ ಇದ್ದರೂ ವೈದ್ಯಕೀಯ ಜಾಮೀನು ಪಡೆಯುವ ಸಲುವಾಗಿ ಮಾವಿನ ಹಣ್ಣು ಮತ್ತು ಸಿಹಿ ಪದಾರ್ಧಗಳನ್ನೆ ಹೆಚ್ಚಾಗಿ ತಿನ್ನುತ್ತಿದ್ದಾರೆ. ಹೀಗಾಗಿ ಅವರಿಗೆ ವೈದ್ಯಕೀಯ ಜಾಮೀನು ನೀಡಬಾರದೆಂದು ಜಾರಿ ನಿರ್ದೇಶನಾಲಯ ಗುರುವಾರ ನ್ಯಾಯಾಲಯಕ್ಕೆ ತಿಳಿಸಿದೆ.
ಕೇಜ್ರಿವಾಲ್ ಅವರ ದೇಹದಲ್ಲಿ ಸಕ್ಕರೆ ಅಂಶದಲ್ಲಿ ಏರುಪೇರಾಗುತ್ತಿದ್ದು ರೆಗ್ಯುಲರ್ ಚೆಕಪ್‌ಗಾಗಿ ವೈದ್ಯರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಭೇಟಿಯಾಗಲು ವೈದ್ಯಕೀಯ ಜಾಮೀನಿಗಾಗಿ ಕೇಜ್ರಿವಾಲ್ ನ್ಯಾಯಾಲಯ ಮೊರೆ ಹೋಗಿದ್ದಾರೆ.
ಈ ಅರ್ಜಿ ವಿಚಾರಣೆ ವೇಳೆ ವಾದ ಮಂಡಿಸಿದ ಇ.ಡಿ. ಪರ ವಕೀಲರು, ಟೈಪ್ 2 ಮಧುಮೇಹ ಇದ್ದರೂ ಕೇಜ್ರಿವಾಲ್ ಹೆಚ್ಚಿನದಾಗಿ ಆಲೂ ಪೂರಿ, ಮಾವಿನ ಹಣ್ಣು ಹಾಗೂ ಸಿಹಿ ಪದಾರ್ಥಗಳನ್ನು ತಿನ್ನುತ್ತಿದ್ದಾರೆ. ವೈದ್ಯಕೀಯ ಜಾಮೀನಿಗಾಗಿಯೇ ಈ ರೀತಿ ಮಾಡುತ್ತಿದ್ದಾರೆ ಎಂದು ಇ.ಡಿ. ನ್ಯಾಯಾಲಯಕ್ಕೆ ತಿಳಿಸಿದೆ.