ಕೇಜ್ರಿವಾಲ್‌ ಜೈಲಿನಲ್ಲಿ ಕಿರುಕುಳ ಪತ್ನಿ ಸುನಿತಾ ಆರೋಪ

| Published : Mar 29 2024, 12:53 AM IST / Updated: Mar 29 2024, 08:23 AM IST

ಕೇಜ್ರಿವಾಲ್‌ ಜೈಲಿನಲ್ಲಿ ಕಿರುಕುಳ ಪತ್ನಿ ಸುನಿತಾ ಆರೋಪ
Share this Article
  • FB
  • TW
  • Linkdin
  • Email

ಸಾರಾಂಶ

ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಜೈಲಿನಲ್ಲಿ ಹೆಚ್ಚು ಕಿರುಕುಳ ಅನುಭವಿಸುತ್ತಿದ್ದಾರೆ, ಅವರನ್ನು ಸರಿಯಾಗಿ ನೋಡಿಕೊಳ್ಳತ್ತಿಲ್ಲ’ ಎಂದು ಅವರ ಪತ್ನಿ ಸುನಿತಾ ಕೇಜ್ರಿವಾಲ್‌ ಆರೋಪಿಸಿದ್ದಾರೆ.

ನವದೆಹಲಿ: ‘ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಜೈಲಿನಲ್ಲಿ ಹೆಚ್ಚು ಕಿರುಕುಳ ಅನುಭವಿಸುತ್ತಿದ್ದಾರೆ, ಅವರನ್ನು ಸರಿಯಾಗಿ ನೋಡಿಕೊಳ್ಳತ್ತಿಲ್ಲ’ ಎಂದು ಅವರ ಪತ್ನಿ ಸುನಿತಾ ಕೇಜ್ರಿವಾಲ್‌ ಆರೋಪಿಸಿದ್ದಾರೆ.

ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ. ಕೇಜ್ರಿವಾಲ್‌ ಅವರನ್ನು ಗುರುವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೇಜ್ರಿವಾಲ್‌ ಅವರ ಶುಗರ್‌ ಲೆವೆಲ್‌ ತೀರಾ ಕಡಿಮೆಯಾಗಿದ್ದು, ಅವರು ಕಿರುಕುಳ ಅನುಭವಿಸುತ್ತಿದ್ದಾರೆ. ಈ ದಬ್ಬಾಳಿಕೆಗೆ ದೆಹಲಿ ಜನರೇ ಉತ್ತರ ನೀಡುತ್ತಾರೆ’ ಎಂದರು.ಮದ್ಯ ಹಗರಣದಲ್ಲಿ ಕೇಜ್ರಿವಾಲ್‌ ಅವರ ನ್ಯಾಯಾಂಗ ಬಂಧನವನ್ನು ಏ.1ರ ವರೆಗೆ ನ್ಯಾಯಾಲಯವು ವಿಸ್ತರಿಸಿದೆ.