ಸಾರಾಂಶ
ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿ ಮಾಡಿರುವ ಪೌರತ್ವ ತಿದ್ದುಪಡಿ ಕಾಯ್ದೆಯು ಧಾರ್ಮಿಕ ಮತ್ತು ಭೌಗೋಳಿಕ ಸಮಾನತೆಯನ್ನು ಉಲ್ಲಂಘಿಸುವ ಹಿನ್ನೆಲೆಯಲ್ಲಿ ಆ ಕುರಿತಾಗಿ ಎಲ್ಲ ಅರ್ಜಿಗಳು ಇತ್ಯರ್ಥವಾಗುವವರೆಗೂ ಕಾಯ್ದೆ ಜಾರಿಗೆ ತಡೆ ನೀಡುವಂತೆ ಕೋರಿ ಕೇರಳ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.
ನವದೆಹಲಿ: ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿ ಮಾಡಿರುವ ಪೌರತ್ವ ತಿದ್ದುಪಡಿ ಕಾಯ್ದೆಯು ಧಾರ್ಮಿಕ ಮತ್ತು ಭೌಗೋಳಿಕ ಸಮಾನತೆಯನ್ನು ಉಲ್ಲಂಘಿಸುವ ಹಿನ್ನೆಲೆಯಲ್ಲಿ ಆ ಕುರಿತಾಗಿ ಎಲ್ಲ ಅರ್ಜಿಗಳು ಇತ್ಯರ್ಥವಾಗುವವರೆಗೂ ಕಾಯ್ದೆ ಜಾರಿಗೆ ತಡೆ ನೀಡುವಂತೆ ಕೋರಿ ಕೇರಳ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ‘ಕೇಂದ್ರ ಸರ್ಕಾರ ಕಾಯ್ದೆಯನ್ನು 2019ರಲ್ಲಿ ಅಂಗೀಕರಿಸಿದರೂ ನಾಲ್ಕು ವರ್ಷಗಳ ಬಳಿಕ ಜಾರಿ ಮಾಡಿರುವುದು ಅದಕ್ಕೆ ತುರ್ತು ಅಗತ್ಯವಿಲ್ಲ ಎಂಬುದನ್ನು ಸಾಬೀತು ಮಾಡಿದೆ. ಅಲ್ಲದೇ ಕಾಯ್ದೆಯಲ್ಲಿ ಕೇವಲ 3 ನೆರೆ ರಾಷ್ಟ್ರಗಳ ಆರು ಧಾರ್ಮಿಕ ಸಮುದಾಯಕ್ಕೆ ಮಾತ್ರ ಪೌರತ್ವ ಕಲ್ಪಿಸಲಾಗಿದೆ. ಇದು ಸಮಾನತೆಯ ಉಲ್ಲಂಘನೆಯಾಗಿದೆ. ಈ ಹಿನ್ನೆಲೆಯಲ್ಲಿ ಕಾನೂನಿಗೆ ಸಾಂವಿಧಾನಿಕ ಮಾನ್ಯತೆ ಇರುವ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಇತ್ಯರ್ಥವಾಗುವವರೆಗೆ ಸಿಎಎ ಜಾರಿಗೆ ತಡೆ ನೀಡಬೇಕೆಂದು ಮನವಿ ಮಾಡಲಾಗಿದೆ’ ಎಂದು ಉಲ್ಲೇಖಿಸಿದೆ.