ಬಿಹಾರದ ಜಮೂಯಿ ಜಿಲ್ಲೆಯಲ್ಲಿ 10ನೇ ತರಗತಿ ಬಾಲಕ, ಬಾಲಕಿ ಮೇಲೆ ಗುಂಪೊಂದು ಲೈಂಗಿಕ ಕಿರುಕುಳ ನೀಡಿದ ಘಟನೆಯ ಪ್ರಮುಖ ಆರೋಪಿಗಳಿಬ್ಬರನ್ನು ಪೊಲೀಸರು ಎನ್‌ಕೌಂಟರ್ ನಡೆಸಿ ಬಂಧಿಸಿದ್ದಾರೆ.
- ಎನ್‌ಕೌಂಟರಲ್ಲಿ ಕಾಲಿಗೆ ಗುಂಡು, ಬಳಿಕ ಬಂಧನ
ಪಿಟಿಐ ಪಟನಾಬಿಹಾರದ ಜಮೂಯಿ ಜಿಲ್ಲೆಯಲ್ಲಿ 10ನೇ ತರಗತಿ ಬಾಲಕ, ಬಾಲಕಿ ಮೇಲೆ ಗುಂಪೊಂದು ಲೈಂಗಿಕ ಕಿರುಕುಳ ನೀಡಿದ ಘಟನೆಯ ಪ್ರಮುಖ ಆರೋಪಿಗಳಿಬ್ಬರನ್ನು ಪೊಲೀಸರು ಎನ್‌ಕೌಂಟರ್ ನಡೆಸಿ ಬಂಧಿಸಿದ್ದಾರೆ.
ಬಂಧಿತರನ್ನು ನಂದನ್ ಯಾದವ್, ಹರೇರಾಮ್ ಯಾದವ್ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಪೊಲೀಸರು ಇದುವರೆಗೆ 7 ಮಂದಿಯನ್ನು ಗುರುತಿಸಿದ್ದು ಈವರೆಗೆ ಐವರ ಬಂಧನ ಆದಂತಾಗಿದೆ.ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಘಟನೆಗೆ ಸಂಬಂಧಿಸಿದ ದೃಶ್ಯಾವಳಿ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದರಲ್ಲಿ ಮುಖಕ್ಕೆ ಕೇಸರಿ ಬಟ್ಟೆ ಧರಿಸಿದ ಪ್ರಮುಖ ಆರೋಪಿಯನ್ನು ಪೊಲೀಸರು ನಂದನ್ ಯಾದವ್ ಎಂದು ಗುರುತಿಸಿ ಆತನ ಬಂಧನಕ್ಕೆ ತೆರಳಿದ್ದರು. ಆದರೆ ಈ ವೇಳೆ ಆತ ತಪ್ಪಿಸಿಕೊಳ್ಳಲು ಮುಂದಾಗಿ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದ. ಹೀಗಾಗಿ ಪೊಲೀಸರು ಆತ್ಮರಕ್ಷಣೆಗಾಗಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಮತ್ತೊಂದೆಡೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ನಂದನ್ ಸಹಚರ ಹರೇರಾಮ್ ಯಾದವ್ ಮೊಣಕಾಲಿಗೆ ಗುಂಡೇಟು ಬಿದ್ದಿದೆ. ಆ ಬಳಿಕ ಇಬ್ಬರನ್ನೂ ಬಂಧಿಸಲಾಗಿದೆ. ಸದ್ಯ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.
ದಿಲ್ಲಿ, ಯುಪಿಯಲ್ಲೂ ಸೆರೆ:ಈ ನಡುವೆ, ಆಗ್ನೇಯ ದೆಹಲಿ ಕಲ್ಕಾಜಿ ಮಂದಿರ ಬಳಿ 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಪೊಲೀಸ್ ಎನ್‌ಕೌಂಟರ್ ನಡೆಸಿ ಮಂಗಳವಾರ ಬಂಧಿಸಿದ್ದಾರೆ.
ಇನ್ನು ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ಮಂಗಳವಾರ ಪೊಲೀಸರೊಂದಿಗೆ ಗುಂಡಿನ ಚಕಮಕಿ ನಡೆದ ನಂತರ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಬಂಧಿಸಲಾಗಿದೆ.