ಖರಗ್‌ಪುರದ ಐಐಟಿ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

| Published : Jun 18 2024, 01:32 AM IST / Updated: Jun 18 2024, 05:06 AM IST

ಸಾರಾಂಶ

ದೇವಿಕಾ ಅತ್ಯುತ್ತಮ ವಿದ್ಯಾರ್ಥಿನಿಯಾಗಿದ್ದು, ಭವಿಷ್ಯದಲ್ಲಿ ಉತ್ತಮ ನೆಲೆ ಕಂಡುಕೊಳ್ಳುವ ಲಕ್ಷಣ ತೋರಿಸಿದ್ದಾಗಿ ಕಾಲೇಜು ಆಡಳಿತ ಸಂಸ್ಥೆ ತಿಳಿಸಿದೆ.

ಕೋಲ್ಕತಾ: ಖರಗ್‌ಪುರದ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಜೈವಿಕ ತಂತ್ರಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ತನ್ನ ಹಾಸ್ಟೆಲ್‌ನ ಹಾಲ್‌ನಲ್ಲಿ ಛಾವಣಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮೂರನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ದೇವಿಕಾ ಪಿಳ್ಳೈ ಅವರ ದೇಹ ಸೋಮವಾರ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೂಡಲೇ ಕಾಲೇಜು ಸಿಬ್ಬಂದಿ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ. ಬಳಿಕ ಪೊಲೀಸರು ವೈದ್ಯಕೀಯ ತಂಡದೊಂದಿಗೆ ಆಗಮಿಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ಪರೀಕ್ಷೆ ಬಳಿಕ ಗೊತ್ತಾಗಲಿದೆ.