ಸಾರಾಂಶ
ಕಾಂಗ್ರೆಸ್ ಪಕ್ಷ ಉತ್ತರ ಪ್ರದೇಶದ 40 ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ. ಇದರಲ್ಲಿ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸ್ಥಾನ ಪಡೆದಿದ್ದಾರೆ.
ನವದೆಹಲಿ: ಕಾಂಗ್ರೆಸ್ ಪಕ್ಷ ಉತ್ತರ ಪ್ರದೇಶದ 40 ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ. ಇದರಲ್ಲಿ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸ್ಥಾನ ಪಡೆದಿದ್ದಾರೆ.
ವಿಶೇಷವೆಂದರೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಈ ‘ಹಿಂದಿ ಹೃದಯಭೂಮಿ’ ಎಂದು ಖ್ಯಾತಿ ಪಡೆದ ರಾಜ್ಯದ ತಾರಾ ಪ್ರಚಾರಕರ ಪಟ್ಟಿಗೆ ಸೇರಿಸಲಾಗಿದೆ.