ಅಧೀರ್‌ ವಿರುದ್ಧ ಕಿಡಿಕಾರಿದ್ದಕ್ಕೆ ಖರ್ಗೆ ಫೋಟೋಗೆ ಮಸಿ!

| Published : May 20 2024, 01:34 AM IST / Updated: May 20 2024, 06:30 AM IST

ಸಾರಾಂಶ

ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ವಿರುದ್ಧ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ ಹೇಳಿಕೆಯನ್ನು ವಿರೋಧಿಸಿದ್ದಕ್ಕೆ ಕಿಡಿಗೇಡಿಗಳು ಭಾನುವಾರ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಚಿತ್ರವಿರುವ ಪೋಸ್ಟರ್‌ಗೆ ಮಸಿ ಬಳಿದು ವಿರೂಪಗೊಳಿಸಿದ್ದಾರೆ

ಕೋಲ್ಕತಾ: ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ವಿರುದ್ಧ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ ಹೇಳಿಕೆಯನ್ನು ವಿರೋಧಿಸಿದ್ದಕ್ಕೆ ಕಿಡಿಗೇಡಿಗಳು ಭಾನುವಾರ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಚಿತ್ರವಿರುವ ಪೋಸ್ಟರ್‌ಗೆ ಮಸಿ ಬಳಿದು ವಿರೂಪಗೊಳಿಸಿದ್ದಾರೆ. 

ಬಳಿಕ ಚೌಧರಿ ಸೂಚನೆ ಮೇರೆಗೆ ಪ್ರಕರಣ ದಾಖಲಿಸಿ ಪೋಸ್ಟರ್‌ ತೆರವುಗೊಳಿಸಿದ್ದಾರೆ. ಕೋಲ್ಕತಾದಲ್ಲಿರುವ ಕಾಂಗ್ರೆಸ್‌ ಪ್ರಧಾನ ಕಚೇರಿ ಎದುರು ಈ ಘಟನೆ ನಡೆದಿದೆ. ಖರ್ಗೆ ಅವರ ಮುಖಕ್ಕೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಶನಿವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂಡಿಯಾ ಕೂಟವನ್ನು ಬಾಹ್ಯದಿಂದ ಬೆಂಬಲ ನೀಡುವುದಾಗಿ ಹೇಳಿಕೆ ನೀಡುತ್ತೇನೆ ಎಂದು ಹೇಳಿದ್ದಕ್ಕೆ ಅಧೀರ್‌ ರಂಜನ್‌ ಚೌಧರಿ ವಿರೋಧ ವ್ಯಕ್ತಪಡಿಸಿದ್ದರು. ಬಳಿಕ ಅಧೀರ್‌ ವಿರೋಧಕ್ಕೆ ಮಲ್ಲಿಕಾರ್ಜುನ ಖರ್ಗೆ ಕಟುವಾಗಿ ಟೀಕಿಸಿ, ಈ ನಿರ್ಧರಿಸುವ ಅಧಿಕಾರ ಹೈಕಮಾಂಡ್‌ಗೆ ಇರುತ್ತದೆ ಹೊರತು ಬೇರೆಯವರಿಗಲ್ಲ ಎಂದಿದ್ದರು.