ಸಾರಾಂಶ
ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವ ಹಿನ್ನೆಲೆಯಲ್ಲಿ ತಮ್ಮನ್ನು ದೆಹಲಿ ಅಬಕಾರಿ ಹಗರಣದಲ್ಲಿ ವಿಚಾರಣೆಗೆ ಕರೆಯುವುದು ಸೂಕ್ತವಲ್ಲ ಎಂಬುದಾಗಿ ಕೆಸಿಆರ್ ಪುತ್ರಿ ಕವಿತಾ ಸಿಬಿಐಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಜೊತೆಗೆ ತಮಗೆ ಪುರ್ವನಿಯೋಜಿತ ಕಾರ್ಯಕ್ರಮಗಳಿದ್ದ ಕಾರಣದಿಂದಲೂ ತಾವು ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂಬುದಾಗಿ ತಿಳೀಸಿದ್ದಾರೆ.
ನವದೆಹಲಿ: ದೆಹಲಿಯ ಅಬಕಾರಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರದಂದು ದೆಹಲಿಯಲ್ಲಿ ಬಿಆರ್‌ಎಸ್ ನಾಯಕಿ ಹಾಗೂ ತೆಲಂಗಾಣ ಮಾಜಿ ಸಿಎಂ ಕೆ. ಚಂದ್ರಶೇಖರ ರಾವ್ ಅವರ ಪುತ್ರಿ ಕೆ. ಕವಿತಾ ಅವರನ್ನು ಕರೆಯಲಾಗಿದ್ದ ವಿಚಾರಣೆಗೆ ಪೂರ್ವನಿಯೋಜಿತ ಕಾರ್ಯಕ್ರಮಗಳಿರುವ ಕಾರಣ ಬರಲಾಗುವುದಿಲ್ಲ ಎಂಬುದಾಗಿ ಸಿಬಿಐಗೆ ಪತ್ರದ ಮೂಲಕ ತಿಳಿಸಿದ್ದಾರೆ. ‘ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯವನ್ನು ಬಿಟ್ಟು ಬರುವ ಸ್ಥಿತಿಯಲ್ಲಿಲ್ಲ. ಅಲ್ಲದೆ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿರುವ ಕಾರಣ ಈ ವಿಚಾರಣೆಗೆ ಗೈರು ಹಾಜರಾಗುತ್ತಿದ್ದು, ವಿಚಾರಣೆಯ ನೋಟಿಸನ್ನು ಅಮಾನತು ಮಾಡಬೇಕೆಂದು ಕೋರುತ್ತೇನೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಇದಕ್ಕೂ ಮೊದಲು ಡಿಸೆಂಬರ್‌ನಲ್ಲೂ ಸಹ ಸಿಬಿಐ ಕವಿತಾರನ್ನು ಅವರ ಮನೆಯಲ್ಲಿಯೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿತ್ತು.