ಸಾರಾಂಶ
- ಜೋಡಿ ಕೊಲೆ ಮಾಡಿ ಚೀಲದಲ್ಲಿ ತುಂಬಿ ಕಾವೇರಿ ನದಿಗೆ ಎಸೆದಿರುವ ದುಷ್ಕರ್ಮಿಗಳು
- ಮೂಲೆಪೆಟ್ಲು ಗ್ರಾಮದ ಸಮೀಪ ಜೋಡಿ ಶವ ಪತ್ತೆಕನ್ನಡಪ್ರಭ ವಾರ್ತೆ ಕೆ.ಆರ್. ನಗರ
ಜೋಡಿ ಕೊಲೆ ಮಾಡಿ ಚೀಲದಲ್ಲಿ ತುಂಬಿ ಕಾವೇರಿ ನದಿಗೆ ಎಸೆದು ಹೋಗಿದ್ದು, ಈ ಎರಡು ಶವಗಲು ಮೈಸೂರು ಜಿಲ್ಲೆ ಪಟ್ಟಣದ ಪೊಲೀಸ್ ಠಾಣಾ ಸರಹದ್ದಿನ ಮೂಲೆಪೆಟ್ಲು ಗ್ರಾಮದ ಸಮೀಪದ ಕೆಆರ್.ಎಸ್ ಹಿನ್ನೀರಿನಲ್ಲಿ ಪತ್ತೆಯಾಗಿದೆತಾಲೂಕಿನ ಮೂಲೆಪೆಟ್ಲು ಸಮೀಪದ ಸಾಗರಕಟ್ಟೆ ಹಿನ್ನೀರಿನಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿದ ಪರಿಸ್ಥಿತಿಯಲ್ಲಿ ಇಬ್ಬರು ಯುವಕರ ಮೃತದೇಹ ಪತ್ತೆಯಾಗಿದೆ. ಸುಮಾರು 25 ರಿಂದ 30 ವರ್ಷ ವಯಸ್ಸಿನ ಯುವಕರನ್ನ ಮತ್ತೊಂದು ಸ್ಥಳದಲ್ಲಿ ಕೊಂದು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಸಾಗರಕಟ್ಟೆ ಹಿನ್ನೀರಿನಲ್ಲಿ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ.
ಓರ್ವನ ಕೈ ಮೇಲೆ ನಾಗರಾಜನ್ VR POSTER 4B LEGEND ಎಂದು ಅಚ್ಚೆ ಹಾಕಿರುವುದು ಕಂಡು ಬಂದಿದೆ. ಅದೇ ರೀತಿ ಮತ್ತೊರ್ವನಶವ ಬೆಳಗ್ಗೆ ಅದೇ ಸ್ಥಳದಲ್ಲಿ ಪತ್ತೆಯಾಗಿದ್ದು, ಮತ್ತೊರ್ವನ ಕೈಯಲ್ಲಿ ಸೂಪರ್ ಮ್ಯಾನ್ , ಅಮ್ಮ ಎಸ್, ಉಪೇಂದ್ರ, VR46 the doctor Legend ಎಂದು ಹಚ್ಚೆ ಹಾಗೂ ಬಲಕೈಯಲ್ಲಿ ಸಿಂಹದ ಚಿತ್ರ ಹಾಗೂ ಶಿಲುಬೆ ಚಿತ್ರ ಮತ್ತು ಹೃದಯದ ಒಳಗೆ AM ಎಂದು ಹಾಕಲಾಗಿದೆ.
ಈ ಬಗ್ಗೆ ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ಪಟ್ಟಣದ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸಂತೋಷ್ ,ಪಿಎಸ್ ಐ ಗಳಾದ ಧನರಾಜು, ನಂಜಪ್ಪ ಸಿಬ್ಬಂದಿಗಳಾದ ಧನಂಜಯ, ಜವರೇಶ್, ಮಂಜು, ದೇವರಾಜು ತಂಡ ತಡರಾತ್ರಿ ಒಬ್ಬನ ಶವ ಮೇಲೆಕ್ಕೆತ್ತಿ ಪರಿಶೀಲಿಸಿದರು.
ಬೆಳ್ಳಂಬೆಳಗ್ಗೆ ಮತ್ತೊರ್ವನ ಶವ ಅದೇ ಸ್ಥಳ (ಹಿನ್ನೀರಿನಲ್ಲಿ) ಪತ್ತೆಯಾಗಿದ್ದು, ಸ್ಥಳಕ್ಕೆ ಜಿಲ್ಲಾ ಎಸ್ಪಿ ಸೀಮಾ ಲಾಟ್ಕರ್ ಹಾಗೂ ಹೆಚ್ಚುವರಿ ಎಸ್ಪಿ ನಂದಿನಿ ಮತ್ತು ಡಿವೈಎಸ್ಪಿ ಕರೀಂರಾವತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಮೃತರ ಮಾಹಿತಿ ಕಲೆ ಹಾಕಲು ಮುಂದಾಗಿದ್ದಾರೆ.ಈರ್ವರನ್ನು ಬೇರೆ ಎಲ್ಲೋ ಕೊಲೆ ಮಾಡಿ ನಂತರ ಚೀಲದಲ್ಲಿ ಕಟ್ಟಿ ಕಾವೇರಿ ನದಿಗೆ ಬೀಸಾಡಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಮೃತನ ಶವವನ್ನು ಮೈಸೂರಿನ ಕೆ.ಆರ್.ಆಸ್ವತ್ರೆಯ ಹಳೇಶವಗಾರಕ್ಕೆ ಸಾಗಿಸಲಾಗಿದ್ದು ಯಾರಾದರು ವಾರಸುದಾರರು ಇದ್ದರೆ ಕೆ.ಆರ್. ನಗರ ಪೊಲೀಸರನ್ನ ಸಂಪರ್ಕಿಸುವಂತೆ ಕೋರಲಾಗಿದೆ.
ಇದಕ್ಕೂ ಮೊದಲು ಹಿನ್ನೀರಿನಲ್ಲಿ ಬೆಳಗ್ಗೆ ಪತ್ತೆಯಾದ ಮತ್ತೊರ್ವನ ಶವವನ್ನು ಬೆರಳಚ್ಚು ತಜ್ಞರು, ಎಫ್.ಎಸ್.ಐ.ಎಲ್. ತಂಡ, ಶ್ವಾನದಳ ಸೇರಿದಂತೆ ಪೊಲೀಸ್ ಅಧಿಕಾರಿಗಳ ತಂಡ ಆಗಮಿಸಿ ಪರಿಶೀಲಿಸಿದರು.ಕೊಲೆಯಾದವರ ವಾರಸ್ಸುದಾರರು ಪತ್ತೆಯಾದರೇ ಸುಲಭವಾಗಿ ಕೊಲೆಗಾರರನ್ನು ಕಂಡು ಹಿಡಿಯಲಾಗವುದು ಎಂದು ಪೊಲೀಸ್ ಇನ್ಸ್ ಪೆಕ್ಟರ್ ಪಿ.ಪಿ.ಸಂತೋಷ್ ತಿಳಿಸಿದರು.