ಸಾರಾಂಶ
ಲಷ್ಕರ್ ಎ ತೊಯ್ಬಾ ಉಗ್ರ ಸಂಘಟನೆಯ ಹಣಕಾಸು ವಹಿವಾಟು ನೋಡಿಕೊಳ್ಳುತ್ತಿದ್ದ, ಉಗ್ರ ಹಫೀಜ್ ಸಯೀದ್‌ನ ಬಲಗೈ ಬಂಟನೊಬ್ಬ ಕರಾಚಿಯಲ್ಲಿ ನಿಗೂಢ ವ್ಯಕ್ತಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ.
ಮೃತನನ್ನು ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ಈತ ಎಲ್‌ಇಟಿಗೆ ವಿವಿಧ ಮೂಲಗಳಿಂದ ನಿಧಿ ಸಂಗ್ರಹಿಸಿ ಆರ್ಥಿಕ ನೆರವಿನ ವ್ಯವಸ್ಥೆ ಮಾಡುತ್ತಿದ್ದು, ಕರಾಚಿಯಲ್ಲಿ ಪ್ರಭಾವಿಯಾಗಿದ್ದ.
ರೆಹಮಾನ್ ಅಂಗಡಿಯಲ್ಲಿ ನಿಂತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು ಆತನ ಮೇಲೆ ಹಾಡಹಗಲೇ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಈ ದೃಶ್ಯ ಸಿಸಿಟೀವಿಯಲ್ಲಿ ಸೆರೆಯಾಗಿದೆ. ಮಾ.16ರಂದು ಹಫೀಜನ ಆಪ್ತ ಅಬು ಕತಲ್ ಎಂಬಾತನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಅದರ ಬೆನ್ನಲ್ಲೇ ಇದೀಗ ಆತನ ಮತ್ತೊಬ್ಬ ಆಪ್ತನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.