ಈ ಚುನಾವಣೆ ಮನುವಾದಿ ಸಿದ್ಧಾಂತದ ವಿರುದ್ಧ ಹೋರಾಟ: ಖರ್ಗೆ

| Published : Apr 15 2024, 01:20 AM IST / Updated: Apr 15 2024, 05:43 AM IST

ಸಾರಾಂಶ

2024ರ ಲೋಕಸಭೆ ಚುನಾವಣೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಹೋರಾಟವಲ್ಲ. ಬದಲಿಗೆ ಆಡಳಿತ ಪಕ್ಷದ ಮನುವಾದಿ ಸಿದ್ಧಾಂತದ ವಿರುದ್ಧದ ಹೋರಾಟವೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು,

ನಾಗ್ಪುರ: 2024ರ ಲೋಕಸಭೆ ಚುನಾವಣೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಹೋರಾಟವಲ್ಲ. ಬದಲಿಗೆ ಆಡಳಿತ ಪಕ್ಷದ ಮನುವಾದಿ ಸಿದ್ಧಾಂತದ ವಿರುದ್ಧದ ಹೋರಾಟವೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು,

ನಾಗ್ಪುರದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿಯ ವಿರುದ್ಧ ಸ್ಪರ್ಧಿಸಿರುವ ಕಾಂಗ್ರೆಸ್‌ನ ವಿಕಾಸ್ ಠಾಕ್ರೆ ಪರ ಪ್ರಚಾರ ಮಾಡಿ ಅವರು ಮಾತನಾಡಿದರು,

‘ಒಂದು ವೇಳೆ ಈ ಚುನಾವಣೆಯಲ್ಲಿ, ಆರೆಸ್ಸೆಸ್‌ , ಬಿಜೆಪಿ ಗೆದ್ದರೆ ಅವರು ಸಂವಿಧಾನವನ್ನು ಮುಗಿಸಿಬಿಡುತ್ತಾರೆ. ಆರ್‌ಎಸ್‌ಎಸ್‌ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಏನೂ ಮಾಡಲಿಲ್ಲ. ಆದರೆ ಅಂಬೇಡ್ಕರ್ ಮತ್ತು ರಾಮ ಮಂದಿರದ ವಿಚಾರವನ್ನಿಟ್ಟುಕೊಂಡು ಮತ ಕೇಳುತ್ತಿದ್ದಾರೆ. ಅಂಬೇಡ್ಕರ್ ಫೋಟೋ ಬಿಡಿ, ಇವರು ತಮ್ಮ ಕಛೇರಿಗಳಲ್ಲಿ ರಾಷ್ಟ್ರ ಧ್ವಜವನ್ನು ಕೂಡ ಇಟ್ಟುಕೊಂಡಿಲ್ಲ’ ಎಂದು ವಾಗ್ದಾಳಿ ನಡೆಸಿದರು.