ಸಾರಾಂಶ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಬುಧವಾರದ ವೇಳೆಗೆ ಅದು ಚಂಡಮಾರುತವಾಗಿ ಬದಲಾಗಲಿದೆ ಎಂದು ಭಾರತದ ಹವಾಮಾನ ಇಲಾಖೆ ತಿಳಿಸಿದೆ.
ಅಮರಾವತಿ/ ಭುವನೇಶ್ವರ್: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಬುಧವಾರದ ವೇಳೆಗೆ ಅದು ಚಂಡಮಾರುತವಾಗಿ ಬದಲಾಗಲಿದೆ ಎಂದು ಭಾರತದ ಹವಾಮಾನ ಇಲಾಖೆ ತಿಳಿಸಿದೆ.
ವಾಯುಭಾರ ಕುಸಿತ ಮತ್ತು ಚಂಡಮಾರುತ ಪರಿಣಾಮ ಪಶ್ಚಿಮ ಬಂಗಾಳ, ಒಡಿಶಾದ ತೀರ ಪ್ರದೇಶಗಳಲ್ಲಿ ಅ.24ರ ರಾತ್ರಿ ಹಾಗೂ 25ರ ಮುಂಜಾನೆ ವೇಳೆ ಹಾದುಹೋಗಲಿದ್ದು, ಈ ವೇಳೆ 100-110 ಕಿಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆ ಇದೆ ಎಂದು ಐಎಂಡಿ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಸಂಜೆಯೊಳಗೆ ದಡ ಸೇರುವಂತೆ ಮೀನುಗಾರರಿಗೆ ಸೂಚಿಸಲಾಗಿದ್ದು, ಅ.26ರ ವರೆಗೆ ಸಮುದ್ರಕ್ಕೆ ಇಳಿಯದಂತೆ ನಿರ್ಬಂಧಿಸಲಾಗಿದೆ.
ಚಂಡಮಾರುತದ ಪ್ರಭಾವ ಒಡಿಶಾದ ಮೇಲೆ ಅಧಿಕವಾಗಿರಲಿದ್ದು, ಭಾರೀ ಗಾಳಿ ಮಳೆಯಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಕೆಲ ಪ್ರದೇಶಗಳಿಗೆ ಕೆಂಪು, ಕೇಸರಿ ಹಾಗೂ ಹಳದಿ ಅಲರ್ಟ್ ಘೋಷಿಸಲಾಗಿದೆ. ಮುಂಜಾಗೃತಾ ಕ್ರಮವಾಗಿ ಕೆಲ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಲಾಗಿದೆ.