ಸಾರಾಂಶ
ಇತ್ತೀಚೆಗೆ ಇಂದೋರ್ ಲೋಕಸಭಾ ಕ್ಷೇತ್ರದ ತಮ್ಮ ಅಭ್ಯರ್ಥಿ ಬಿಜೆಪಿಗೆ ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ನೋಟಾಗೆ ಮತ ಚಲಾಯಿಸುವಂತೆ ಕಾರ್ಯಕರ್ತರಿಗೆ ಕಾಂಗ್ರೆಸ್ ಕರೆ ಕೊಟ್ಟಿದೆ.
ಇಂದೋರ್: ಇತ್ತೀಚೆಗೆ ಇಂದೋರ್ ಲೋಕಸಭಾ ಕ್ಷೇತ್ರದ ತಮ್ಮ ಅಭ್ಯರ್ಥಿ ಬಿಜೆಪಿಗೆ ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ನೋಟಾಗೆ ಮತ ಚಲಾಯಿಸುವಂತೆ ಕಾರ್ಯಕರ್ತರಿಗೆ ಕಾಂಗ್ರೆಸ್ ಕರೆ ಕೊಟ್ಟಿದೆ.
ಈ ಬಗ್ಗೆ ಹೇಳಿಕೆ ನೀಡಿರುವ ಪಕ್ಷದ ನಾಯಕ ಶೋಭಾ ಓಜಾ, ಇಂದೋರ್ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಅವರಿಗೆ ಬಿಜೆಪಿ ಆಮಿಷಗಳನ್ನೊಡ್ಡಿ ತಮ್ಮ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಪ್ರಜಾಪ್ರಭುತ್ವವನ್ನು ಕೊಲೆ ಮಾಡಿದೆ. ಆದ್ದರಿಂದ ಮತದಾರರು ನೋಟಾಗೆ ಮತಚಲಾಯಿಸಿ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು ತಿಳಿಸಿದ್ದಾರೆ.