ಬಿಜೆಪಿ ಅಭ್ಯರ್ಥಿಗಳಿಗೆ ಪ್ರಧಾನಿ ಮೋದಿ ಪತ್ರ

| Published : Apr 18 2024, 02:16 AM IST / Updated: Apr 18 2024, 06:49 AM IST

ಸಾರಾಂಶ

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿರುವ ನಡುವೆಯೇ ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಪಕ್ಷದ ಅಭ್ಯರ್ಥಿಗಳ ಮೂಲಕ ಮತದಾರರಿಗೆ ಭಾವನಾತ್ಮಕ ಪತ್ರ ಬರೆದಿದ್ದಾರೆ.

ನವದೆಹಲಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿರುವ ನಡುವೆಯೇ ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಪಕ್ಷದ ಅಭ್ಯರ್ಥಿಗಳ ಮೂಲಕ ಮತದಾರರಿಗೆ ಭಾವನಾತ್ಮಕ ಪತ್ರ ಬರೆದಿದ್ದಾರೆ.

ಈ ಕುರಿತು ಬರೆದಿರುವ ಪತ್ರದಲ್ಲಿ, ‘ಬೇಸಿಗೆಯಲ್ಲಿ ಬಿಸಿಲಿನ ಮೂಲಕ ತಾಪ ಹೆಚ್ಚುತ್ತಿದೆ ಎಂಬುದು ತಿಳಿದಿದೆ. ಈ ಹಿನ್ನೆಲೆಯಲ್ಲಿ ಬಿಸಿಲಿನ ಕಾವು ಏರುವ ಮುನ್ನವೇ ಮತಗಟ್ಟೆಗೆ ಬಂದು ದೇಶದ ಉಜ್ವಲ ಭವಿಷ್ಯಕ್ಕಾಗಿ ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ’ ಎಂದು ಕರೆ ನೀಡಿದ್ದಾರೆ.

ಅಣ್ಣಾಮಲೈಗೆ ಶ್ಲಾಘನೆ: ಇದೇ ವೇಳೆ ಕೊಯಮತ್ತೂರಿನ ಬಿಜೆಪಿ ಅಭ್ಯರ್ಥಿ ಅಣ್ಣಾಮಲೈಗೆ ಬರೆದಿರುವ ಪತ್ರದಲ್ಲಿ ಅವರನ್ನು ಸರ್ಕಾರಿ ಸೇವೆ ತ್ಯಜಿಸಿ ಜನಸೇವೆ ಮಾಡುವ ಕಾರ್ಯದಲ್ಲಿ ತಮ್ಮನ್ನು ಸಮರ್ಪಿಸಿಕೊಂಡಿರುವುದಕ್ಕೆ ಅಭಿನಂದಿಸಿದ್ದಾರೆ.

ದೇಶಾದ್ಯಂತ 102 ಕ್ಷೇತ್ರಗಳಲ್ಲಿ ಏ.19ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ.