ಸಾರಾಂಶ
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಹತ್ಯೆ ಮಾಡಿದ್ದ ಅವರ ಅಂಗರಕ್ಷಕ ಬೇಅಂತ್ ಸಿಂಗ್ ಅವರ ಪುತ್ರ ಸರಬ್ಜಿತ್ ಸಿಂಗ್ ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಫರೀದ್‌ಕೋಟ್ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಪ್ರಕಟಿಸಿದ್ದಾರೆ.
ಚಂಡೀಗಢ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಹತ್ಯೆ ಮಾಡಿದ್ದ ಅವರ ಅಂಗರಕ್ಷಕ ಬೇಅಂತ್ ಸಿಂಗ್ ಅವರ ಪುತ್ರ ಸರಬ್ಜಿತ್ ಸಿಂಗ್ ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಫರೀದ್‌ಕೋಟ್ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಪ್ರಕಟಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ತಮಗೆ ಕ್ಷೇತ್ರದ ಜನತೆ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಲು ಒತ್ತಾಯ ಮಾಡಿದ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ತಿಳಿಸಿದರು. ಇದಕ್ಕೂ ಮೊದಲು ಅವರು ಹಲವು ಬಾರಿ ಚುನಾವಣೆಗೆ ಸ್ಪರ್ಧೆ ಮಾಡಿದ್ದರೂ ಗೆಲುವು ಕಂಡಿಲ್ಲ. ಆಪರೇಷನ್ ಬ್ಲೂಸ್ಟಾರ್ ಕಾರ್ಯಾಚರಣೆ ನಡೆಸಿದಕ್ಕೆ ಪ್ರತಿಯಾಗಿ 1984ರಲ್ಲಿ ಬೇಅಂತ್ ಸಿಂಗ್, ಇಂದಿರಾರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದರು.