ಹಿಂದೂಗಳ ಧಾರ್ಮಿಕ ನಂಬಿಕೆ ಮತ್ತು ಮಹಿಳೆ ಕುರಿತ ಆಕ್ಷೇಪಾರ್ಹ ಹೇಳಿಕೆ ಸಂಬಂಧ ಮದ್ರಾಸ್‌ ಹೈಕೋರ್ಟ್‌ ಗುರುವಾರ ಅರಣ್ಯ ಸಚಿವ ಕೆ.ಪೊನ್ಮುಡಿ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಿ ಅಥವಾ ನ್ಯಾಯಾಂಗ ನಿಂದನೆ ಪ್ರಕರಣ ಎದುರಿಸಿ ಎಂದು ತಮಿಳುನಾಡು ಪೊಲೀಸರಿಗೆ ಎಚ್ಚರಿಕೆ ನೀಡಿದೆ.  

ಚೆನ್ನೈ: ಹಿಂದೂಗಳ ಧಾರ್ಮಿಕ ನಂಬಿಕೆ ಮತ್ತು ಮಹಿಳೆ ಕುರಿತ ಆಕ್ಷೇಪಾರ್ಹ ಹೇಳಿಕೆ ಸಂಬಂಧ ಮದ್ರಾಸ್‌ ಹೈಕೋರ್ಟ್‌ ಗುರುವಾರ ಅರಣ್ಯ ಸಚಿವ ಕೆ.ಪೊನ್ಮುಡಿ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಿ ಅಥವಾ ನ್ಯಾಯಾಂಗ ನಿಂದನೆ ಪ್ರಕರಣ ಎದುರಿಸಿ ಎಂದು ತಮಿಳುನಾಡು ಪೊಲೀಸರಿಗೆ ಎಚ್ಚರಿಕೆ ನೀಡಿದೆ. ಜತೆಗೆ, ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಮುಂದುವರಿಸುವಂತೆಯೂ ಪೊಲೀಸರಿಗೆ ಸೂಚಿಸಿದೆ.

ಇತ್ತೀಚೆಗೆ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಪೊನ್ಮುಡಿ ಅವರು, ಶೈವ ಮತ್ತು ವೈಷ್ಣವ ಪಂಥದ ನಾಮವನ್ನು ಲೈಂಗಿಕ ಭಂಗಿಗೆ ಹೋಲಿಸಿದ್ದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಪೀಠ, ಇದು ಮಹಿಳೆಯರು ಮತ್ತು ಧಾರ್ಮಿಕ ಭಾವನೆಗೆ ವಿರುದ್ಧವಾದ ಹೇಳಿಕೆ. ಈ ಸಂಬಂಧ ಸಾಮಾನ್ಯ ದೂರು ಸಲ್ಲಿಕೆಯಾದರೂ ದ್ವೇಷ ಭಾಷಣದ ಕೇಸ್‌ ದಾಖಲಾಗಬೇಕು ಎಂದಿದೆ.

ಈ ಹೇಳಿಕೆ ಕುರಿತು ಬಿಜೆಪಿ ಮಾತ್ರವಲ್ಲದೆ, ಡಿಎಂಕೆ ಮುಖಂಡರಿಂದಲೂ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಈಗಾಗಲೇ ಪೊನ್ಮುಡಿ ಅವರು ತಮ್ಮ ಹೇಳಿಕೆಗೆ ಸಂಬಂಧಿಸಿ ಕ್ಷಮೆ ಕೋರಿದ್ದಾರೆ. ಸುದೀರ್ಘ ಕಾಲದಿಂದ ಸಾರ್ವಜನಿಕ ಬದುಕಿನಲ್ಲಿರುವ ನಾನು ಇಂಥ ಹೇಳಿಕೆ ನೀಡಬಾರದಿತ್ತು ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.