ಸಾರಾಂಶ
ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಪವಿತ್ರ ಕುಂಭಮೇಳಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ಭೇಟಿ ನೀಡಿ, ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು.
ಮಹಾಕುಂಭ ನಗರ: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಪವಿತ್ರ ಕುಂಭಮೇಳಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ಭೇಟಿ ನೀಡಿ, ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು. ಸಂಗಮದಲ್ಲಿ ಸ್ನಾನ ಮಾಡಿದ ಬಳಿಕ ಮುರ್ಮು ಗಂಗಾ ನದಿಗೆ ತೆಂಗಿನಕಾಯಿ ಅರ್ಪಿಸಿ, ಸೂರ್ಯ ದೇವನಿಗೆ ಪ್ರಾರ್ಥನೆ ಸಲ್ಲಿಸಿದರು.
ಇನ್ನು ಮುರ್ಮು ಕುಂಭಮೇಳ ಭೇಟಿ ಸಂದರ್ಭದಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ರಾಜ್ಯಪಾಲೆ ಆನಂದಿಬೆನ್ ಪಟೇಲ್ ಕೂಡ ಜೊತೆಗಿದ್ದರು. ಸಂಗಮದಲ್ಲಿ ಸ್ನಾನ , ಪ್ರಾರ್ಥನೆ ಬಳಿಕ ರಾಷ್ಟ್ರಪತಿ, ಅಕ್ಷಯವಟ ಮತ್ತು ಬಡೇ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡಿ ಆಶಿರ್ವಾದ ಪಡೆದರು.